ಮೈಸೂರಿನಲ್ಲಿ ಇಂದು ಒಂದೇ ದಿನ ಬರೋಬ್ಬರಿ 3500 ಪಾಸಿಟಿವ್ ಕೇಸ್ ಪತ್ತೆ
1 min readಮೈಸೂರು: ಮೈಸೂರಿನಲ್ಲಿ ಇಂದು ಒಂದೇ ದಿನ ಬರೋಬ್ಬರಿ 3500 ಹೊಸ ಪಾಸಿಟಿವ್ ಕೇಸ್ ದಾಖಲಾಗಿದೆ.
ಅಲ್ಲದೆ ಮೈಸೂರಿನಲ್ಲಿ ಕರೋನಾ ಸೋಂಕಿತರು ಮರಣ ಮೃದಂಗ ಮುಂದುವರೆದಿದ್ದು, ಇಂದು 13 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 22 ದಿನದಲ್ಲಿ 135 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಇಲ್ಲಿಯ ವರೆಗು ಮೈಸೂರಿನಲ್ಲಿ ಒಟ್ಟು 1205 ಮಂದಿ ಕರೋನಾಗೆ ಮೃತಪಟ್ಟಿದ್ದಾರೆ.
ಇನ್ನು ಇಂದು 1078 ಮಂದಿ ಗುಣಮುಖರಾಗಿದ್ದು, ಒಟ್ಟು ಈ ವರೆಗು 64795 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಒಟ್ಟು ಸೋಂಕಿತರು 76775 ಮಂದಿಗೆ ಸೋಂಕು ತಗುಲಿದ್ದು, ಇದೀಗಾ ಸಕ್ರಿಯ ಪ್ರಕರಣಗಳ ಸಂಖ್ಯೆ 10775ಕ್ಕೆ ಏರಿದೆ.