ರಾಜ್ಯದಲ್ಲಿ ಮತ್ತೆ 14 ದಿನ ಲಾಕ್‌ಡೌನ್: ಸಿಎಂ ಯಡಿಯೂರಪ್ಪ ಘೋಷಣೆ
1 min readಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಮತ್ತೆ 14 ದಿನ ಲಾಕ್‌ಡೌನ್ ವಿಸ್ತರಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು ‘ತಜ್ಞರ ಅಭಿಪ್ರಾಯ ಪರಿಗಣಿಸಿ,ಕೊರೋನಾ ನಿಯಂತ್ರಣದ ನಿಟ್ಟಿನಲ್ಲಿ ರಾಜ್ಯಾದ್ಯಂತ ವಿಧಿಸಲಾಗಿದ್ದ ಕಠಿಣ ನಿರ್ಬಂಧಗಳನ್ನು ದಿನಾಂಕ 24.05.2021 ರಿಂದ 07.06.2021ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಲಾಗಿದೆ.ಜನರ ಆರೋಗ್ಯದ ದೃಷ್ಠಿಯಿಂದ ನಿರ್ಬಂಧಗಳನ್ನು ಮುಂದುವರೆಸಿದ್ದು, ಮುಂದೆಯೂ ಸಾರ್ವಜನಿಕರ ಸಹಕಾರ ಕೋರುತ್ತೇನೆ’ ಎಂದು ತಿಳಿಸಿದ್ದಾರೆ.