ರಾಜ್ಯದ 30ನೇ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ
1 min readಬೆಂಗಳೂರು : ರಾಜ್ಯದ 30ನೇ ಮುಖ್ಯಮಂತ್ರಿ ಆಗಿ ಬಸವರಾಜ್ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಬೆಳಗ್ಗೆ 11ಗಂಟೆಗೆ ರಾಜ್ಯಪಾಲರಾದ ಗೆಹ್ಲೋಟ್ ಅವರು ಪ್ರಮಾಣ ವಚನ ಬೋಧನೆ ಮಾಡಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಮಾಡುವ ಮೂಲಕ ರಾಜ್ಯದ 30ನೇ ಮುಖ್ಯಮಂತ್ರಿಯಾಗಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬೊಮ್ಮಾಯಿ ಕುಟುಂಬಸ್ಥರು, ಮಾಜಿ ಸಿಎಂ ಯಡಿಯೂರಪ್ಪ ಸೇರಿ ಹಲವು ಗಣ್ಯರು ಉಪಸ್ಥಿತಿಯಲ್ಲಿ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.