1 ಕೋಟಿ ಕೊರೊನಾ ಲಸಿಕೆ ಖರೀದಿಗೆ ಮುಂದಾದ ರಾಜ್ಯ ಸರ್ಕಾರ
1 min readಮೈಸೂರು: ಮೇ 1ನೇ ತಾರೀಖಿನಿಂದ, 18 ರಿಂದ 44 ವರ್ಷದೊಳಗಿನವರಿಗೆ ವ್ಯಾಕ್ಸಿನೇಷನ್ ಪ್ರಾರಂಭವಾಗುವ ಹಿನ್ನಲೆ ರಾಜ್ಯ ಸರ್ಕಾರ ಮೊದಲ ಹಂತದಲ್ಲಿ 400 ಕೋಟಿ ವೆಚ್ಚದಲ್ಲಿ 1 ಕೋಟಿ ಕೊರೊನಾ ಲಸಿಕೆ ಖರೀದಿಗೆ ಮುಂದಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿ ತಿಳಿಸಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮೊದಲ ಹಂತದಲ್ಲಿ, 400 ಕೋಟಿ ರೂ. ವೆಚ್ಚದಲ್ಲಿ 1 ಕೋಟಿ ಕೋವಿಶೀಲ್ಡ್ ಲಸಿಕೆ ಖರೀದಿಸಲು ಅನುಮೋದನೆ ನೀಡಲಾಗಿದೆ. ರಾಜ್ಯದಲ್ಲಿ ಮೇ 1ನೇ ತಾರೀಖಿನಿಂದ, 18 ರಿಂದ 44 ವರ್ಷದೊಳಗಿನವರಿಗೆ ಲಸಿಕೆ ಹಾಕಲು ಇದನ್ನು ಬಳಸಲಾಗುವುದು ಎಂದಿದ್ದಾರೆ.