ಕೆಆರ್‌ಎಸ್ ಡ್ಯಾಂಗೆ ಒಳಹರಿವು ಹೆಚ್ಚಳ: 1 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ
1 min readಮಂಡ್ಯ: ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 1,00,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದು ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರರು ಪ್ರಕಟಣೆ ಹೊರಡಿಸಿದ್ದಾರೆ.
ಕೆಆರ್‌ಎಸ್ ಜಲಾಶಯದಿಂದ ಸುಮಾರು 1,00,000 ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು. ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಹಾಗೂ ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಂಡು ಸುರಕ್ಷಿತ ಸ್ಥಾನಗಳಿಗೆ ತೆರಳುವಂತೆ ಮನವಿ ಮಾಡಿದ್ದಾರೆ.
ಇನ್ನು ಕೆ.ಆರ್.ಎಸ್ ಮುಂಭಾಗದ ಕಾರಂಜಿ ಕೆರೆಯ ವಾಕಿಂಗ್ ಪಾಥ್ ಮುಳುಗಡೆ ಆಗಿದ್ದು. ಪ್ರವಾಸಿಗರ ಪ್ರವೇಶಕ್ಕೆ ಇಲ್ಲಿ ನಿರ್ಬಂಧ ವಿಧಿಸಲಾಗಿದೆ.