ಕೆ.ಆರ್.ಎಸ್. ಡ್ಯಾಂನಿಂದ 70 ಸಾವಿರ ಕ್ಯೂ.ವರೆಗು ನದಿಗೆ ನೀರು!
1 min readಕೃಷ್ಣರಾಜಸಾಗರ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಹರಿದು ಬರುತ್ತಿದ್ದು , ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 25 ಸಾವಿರ ಕ್ಯೂಸೆಕ್ಸ್ನಿಂದ 75 ಸಾವಿರ ಕ್ಯೂಸೆಕ್ಸ್ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಹಾಗೂ ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ.
ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿ ಇರುವ ಮತ್ತು ನದಿಯ ಎರಡೂ ದಂಡೆಗಳಲ್ಲಿ ಇರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಎಚ್ಚರಿಕೆ ವಹಿಸಿ ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಈ ಮೂಲಕ ಕೋರಲಾಗಿದೆ.