ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದ ಚಿರತೆ
1 min readತಿ.ನರಸೀಪುರ: ಅರಣ್ಯ ಇಲಾಖೆ ಅಧಿಕಾರಿಗಳು ಇರಿಸಿದ್ದ ಬೋನಿಗೆ ಚಿರತೆ ಬಿದ್ದ ಘಟನೆ ತಾಲ್ಲೂಕಿನ ಎಸ್.ದೊಡ್ಡಪುರ ಗ್ರಾಮದ ಬಳಿ ನಡೆದಿದೆ.
ನಿವೃತ್ತ ಐಎಎಸ್ ಅಧಿಕಾರಿ ರಾಜಣ್ಣ ಎಂಬುವರ ತೋಟದಲ್ಲಿ ಚಿರತೆ ಪತ್ತೆಯಾಗಿದೆ. ಇಂದು ಬೆಳಿಗ್ಗೆ ಚಿರತೆ ಬೋನಿಗೆ ಬಿದ್ದಿದೆ. ಕಳೆದ 1ತಿಂಗಳ ಹಿಂದೆ ಇದೆ ಜಮೀನಿನಲ್ಲಿ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿತ್ತು. ಇದೀಗ ಒಂದು ತಿಂಗಳ ಬಳಿಕ ಮತ್ತೊಂದು ಚಿರತೆ ಸೆರೆಯಾಗಿದೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು ಚಿರತೆ ಸ್ಥಳಾಂತರಕ್ಕೆ ಮುಂದಾಗಿದ್ದಾರೆ. ಚಿರತೆ ಸೆರೆಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.