ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಮಾರ್ಗಸೂಚಿ ಅನುಸರಿಸೋಣ – ಶಾಸಕ ಜಿಟಿಡಿ

1 min read

ಮೈಸೂರು: ಕೋವಿಡ್ ಎರಡನೇ ಅಲೆಯಲ್ಲಿ ವೈರಸ್ ಅತ್ಯಂತ ವೇಗವಾಗಿ ಹರಡುತ್ತಿದೆ. ಈ ಮಹಾಮಾರಿ ನಿಯಂತ್ರಣಕ್ಕೆ ಇಂದು ವಿಶ್ವವೇ ಪರಿತಪಿಸುತ್ತಿದೆ. ಇದಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಯಸೂಚಿ, ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುತ್ತಿವೆ. ಆದರೂ ಸಹ ಕರೋನಾ ಹತೋಟಿಗೆ ಬರುತ್ತಿಲ್ಲ.ಇದಕ್ಕೆ ಸಾರ್ವಜನಿಕರ ಸಹಭಾಗಿತ್ವವೂ ಸಹ ಬೇಕಾಗಿರುತ್ತದೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ.

ಸಾರ್ವಜನಿಕರು ಕೋವಿಡ್ ನ ಲಕ್ಷಣಗಳು ಕಂಡು ಬಂದರೆ ಕೂಡಲೇ ಹತ್ತಿರದಲ್ಲಿ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆಯನ್ನು ಪಡೆದುಕೊಳ್ಳಬೇಕು. ಕೋವಿಡ್ ಪಾಸಿಟಿವ್ ಇರುವ ರೋಗಲಕ್ಷಣವಿಲ್ಲದರು ಮನೆಯಲ್ಲಿ ಇದ್ದು, ಕಳೆದ ಬಾರಿ ನನಗೆ ಕೊರೋನ ಬಂದ ಸಂದರ್ಭದಲ್ಲಿ ನಾನು ಹೋಂ ಐಸೋಲೇಷನ್ ಆಗಿ ಪ್ರತಿದಿನ ನೀರಿನಲ್ಲಿ ಶುಂಠಿ, ಬೆಳ್ಳುಳ್ಳಿ, ತುಳಸಿ ಹಾಗೂ ಅರಿಸಿಣವನ್ನು ಹಾಕಿ ಚೆನ್ನಾಗಿ‌ ಕುದಿಸಿ 10 ನಿಮಿಷಗಳ ಕಾಲ ಮೂರು ಬಾರಿ ಸ್ಟೀಂ ಪಡೆಯುವುದರ ಮೂಲಕ ಗುಣಮುಖನಾಗಿರುತ್ತೇನೆ. ನೀವುಗಳು ಸಹ ಇದೆ ರೀತಿ ಸ್ಟೀಂ ಪಡೆದುಕೊಳ್ಳುವಂತೆ ಮನವಿ ಮಾಡುತ್ತೇನೆ.

ಯಾರಿಗೆ ಎಷ್ಟೆ ಕಷ್ಟ ಇದ್ದರು ಸಹ ಮನೆಯಿಂದ ಹೊರಗೆ ಬರದೆ, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಕೋರುತ್ತೇನೆ.

ನಮ್ಮ ಪ್ರಾಣ ಉಳಿದಿದ್ದರೆ ನಾವು ಏನು ಬೇಕಾದರು ಸಾಧಿಸಬಹುದು ಆದ್ದರಿಂದ ಕೋವಿಡ್ ಮಾರ್ಗಸೂಚಿ ಅನುಸರಿಸಿ, ವಾರಂತ್ಯದ ಲಾಕ್ಡೌನ್ ಸೇರಿದಂತೆ ರಾತ್ರಿ ಕರ್ಫ್ಯೂಗೆ ಬೆಂಬಲ ನೀಡಿ, ತುರ್ತು ಕೆಲಸ ಇದ್ದರೆ ಮಾತ್ರ ಹೊರಬನ್ನಿ, ಅನಾವಶ್ಯಕ ಓಡಾಟ ಬೇಡ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್, ಸ್ಯಾನಿಟೈಸರ್ ಬಳಸಿ, ಅಗತ್ಯಕ್ಕಿಂತ ಹೆಚ್ಚು ಹೊತ್ತು ಒಂದೆಡೆ ನಿಲ್ಲಬೇಡಿ, ಗುಂಪು ಸೇರಲು ಅವಕಾಶ ಕೊಡಬೇಡಿ.

ಸರ್ಕಾರ ಸೂಚಿಸಿರುವ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಎಲ್ಲರಲ್ಲಿ ಮನವಿ ಮಾಡುತ್ತೇನೆ.

ಸೋಂಕಿತರು ಹೋಂ ಐಸೋಲೇಷನ್ ನಲ್ಲಿದ್ದರೆ ಅಂಥವರು ಕ್ಯಾರಂಟೇನ್ ಅವಧಿ ಮುಗಿಯುವವರೆಗೂ ಮನೆಯಲ್ಲೇ ಇದ್ದು, ಅಂತರ ಕಾಯ್ದುಕೊಂಡು ಬೇಗ ಗುಣಮುಖರಾಗಲಿ, ಒಂದು ವೇಳೆ ತೀವ್ರ ಅಸ್ವಸ್ಥರಾದರೆ ತಕ್ಷಣ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಲಿ, ಎಂದು ಮನವಿ ಮಾಡುತ್ತೇನೆ.

About Author

Leave a Reply

Your email address will not be published. Required fields are marked *