ಶಿಕ್ಷಕರ ಕ್ಷೇತ್ರ ಪೊಲ್ಯೂಟ್ ಮಾಡುವ ಕೆಲಸ ನಮ್ಮ ಜೆಡಿಎಸ್ ನಾಯಕರಿಂದಲೇ ಆಗ್ತಿದೆ- MLC ಮರಿತಿಬ್ಬೇಗೌಡ
1 min readಮೈಸೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಸುದ್ದಿಗೋಷ್ಠಿ ನಡೆಸಿ ಕುಮಾರಸ್ವಾಮಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಜೆಡಿಎಸ್ ಕಾರ್ಯಕರ್ತರಾಗಿ ದುಡಿದ ಜಯರಾಂಗೆ ವಿಧಾನ ಪರಿಷತ್ ಚುನಾವಣೆ ಟಿಕೆಟ್ ಕೊಡಲಿಲ್ಲ. ಜಯರಾಂ ಬಳಿ ಹಣ ಇಲ್ಲ ಎಂದು ಟಿಕೆಟ್ ನಿರಾಕರಿಸಲಾಗಿತ್ತು. ಜೆಡಿಎಸ್ ಕಾರ್ಯಕರ್ತನಲ್ಲದ
ಹಣ ಇರುವ ವ್ಯಕ್ಯಿಗೆ ಟಿಕೆಟ್ ಕೊಡಲಾಗಿದೆ. ಆದರೆ ಇದನ್ನ ಪ್ರಶ್ನೆ ಮಾಡಿದ್ದಕ್ಕೆ ನಾನು ಹೇಳಿದ್ದನ್ನು ಎಚ್.ಡಿ. ಕುಮಾರಸ್ವಾಮಿ ತಿರುಚಿ ಬೇರೆ ರೀತಿ ಹೇಳಿಕೆ ಕೊಟ್ಟಿದ್ದಾರೆ. ನಾನು ದುಡ್ಡು ತೆಗೆದು ಕೊಂಡು ಟಿಕೆಟ್ ಕೊಟ್ಟಿದ್ದಾರೆ ಎಂದು ಹೇಳಿಲ್ಲ. ಹಣ ಇರುವವರಿಗೆ ಟಿಕೆಟ್ ಕೊಟ್ಟಿದ್ದಾರೆ ಎಂದು ಹೇಳಿದ್ದೇನೆ.
ದುಡ್ಡಿಗಾಗಿ ಟಿಕೆಟ್ ಮಾರಿ ಕೊಂಡಿದ್ದಾರೆ ಎಂದು ನಾನು ಹೇಳಿಯೆ ಇಲ್ಲ ಆದರೆ ಎಚ್ಡಿಕೆ ನನ್ನ ಮಾತು ತಿರುಚಿದ್ದಾರೆ ಎಂದ್ರು. ಈ ಹಿಂದೆ ಪ್ರಜ್ವಲ್ ರೇವಣ್ಣ, ಜೆಡಿಎಸ್ ನಲ್ಲಿ ಸೂಟಕೇಸ್ ಇದ್ದವರಿಗೆ ಮೊದಲ ಸ್ಥಾನ ಎಂದು ಹೇಳಿದ್ದರು. ಅವತ್ತು ಎಚ್ಡಿಕೆ ಏನೂ ಮಾತಾಡಲಿಲ್ಲ ಯಾಕೆ ಎಂದು ಪ್ರಶ್ನಿಸಿದ್ರು.
ಇನ್ನು ಮಾತು ಮುಂದುವರೆಸಿದ ಮರಿತಿಬ್ಬೆಗೌಡರು, ನನಗೆ ಎರಡು ಚುನಾವಣೆಯಲ್ಲಿ ಜೆಡಿಎಸ್ ನಿಂದ ಬಿ ಫಾರಂ ಕೊಟ್ಟರು. ಆದರೆ, ಎಚ್ಡಿ ದೇವೇಗೌಡರು, ಎಚ್ಡಿ ಕುಮಾರಸ್ವಾಮಿ ಆ ಚುನಾವಣೆಗಳಲ್ಲಿ ನನ್ನ ಪರವಾಗಿ ಒಂದು ದಿನವೂ ಪ್ರಚಾರಕ್ಕೆ ಬರಲಿಲ್ಲ. ಟಿಕೆಟ್ ಕೊಟ್ಟು ನನ್ನ ಸೋಲಿಸುವ ಯತ್ನವನೂ ಜೆಡಿಎಸ್ ವರಿಷ್ಠರು ಮಾಡಿದರು. ಆದರೂ ನಾನು ಗೆದ್ದೆ. ಪದವೀಧರ ಕ್ಷೇತ್ರಕ್ಕೆ ಜೆಡಿಎಸ್ ನಿಂದ ಟಿಕೆಟ್ ಕೊಟ್ಟಿರೋ ರಾಮುಗೆ ಯಾವ ಮಾನದಂಡದಲ್ಲಿ ಟಿಕೆಟ್ ಕೊಟ್ಟಿರಿ? ಜೆಡಿಎಸ್ ನಲ್ಲಿ ದುಡ್ಡೆ ಮಾನದಂಡನಾ? ಪಕ್ಷಕ್ಕಾಗಿ ದುಡಿಮೆ ಮಾಡಿದ್ದು ಮಾನದಂಡ ಅಲ್ವಾ ? ಜಯರಾಂ 30 ವರ್ಷದಿಂದ ಜೆಡಿಎಸ್ ಗೆ ದುಡಿದಿದ್ದಾರೆ. ಯಾವ ಚುನಾವಣೆಯಲ್ಲಿ ನನಗೆ ಎಚ್ಡಿಕೆ ಎಷ್ಟು ಹಣ ಕೊಟ್ಟಿದ್ದಾರೆ. ಅದನ್ನು ಬಹಿರಂಗವಾಗಿ ಹೇಳಲಿ. ನನಗೆ ಮೂರು ವರ್ಷ ವಿಧಾನ ಪರಿಷತ್‌ನ ಉಪಸಭಾಪತಿಯಾಗಿ ಜೆಡಿಎಸ್ ಮಾಡಿದೆ.
ನನಗೆ ವಾಸ ಮಾಡಲು ಮೈಸೂರಿನಲ್ಲಿ ಸ್ವಂತ ಮನೆ ಇಲ್ಲ. ಇಲ್ಲಿ ಮನೆ ಕಟ್ಟೋಕೆ ಶುರು ಮಾಡಿ ಮೂರು ವರ್ಷವಾಯ್ತು. ಇನ್ನೂ ನನ್ನ ಕೈಯಲ್ಲಿ ಮನೆ ಮುಗಿಸಲು ಆಗಿಲ್ಲ. ನನ್ನ ಬದುಕು ತೆರೆದ ಪುಸ್ತಕ. ನನ್ನ ಬಗ್ಗೆ ಅನುಮಾನ ಬರುವ ರೀತಿ ಯಾಕೆ ಮಾತಾಡುತ್ತಿರಿ ಉದ್ಯಮಿಗಳನ್ನು ಜೆಡಿಎಸ್ ನಿಂದ ವಿಧಾನಪರಿಷತ್ ಕಳಿಸಲಾಗಿದೆ. ಇದುವರೆಗೂ ರೈತನನ್ನು, ಪಕ್ಷದ ನಿಷ್ಠಾವಂತ ಕಾರ್ಯಕರ್ತನನ್ನು ವಿಧಾನ ಪರಿಷತ್ ಗೆ ಜೆಡಿಎಸ್ ನಿಂದ ಕಳಿಸಲಿಲ್ಲಾ ಯಾಕೆ? ಜೆಡಿಎಸ್‌ನಿಂದ ಹೊರಹೋದ ಶಂಕರ್ ಬಗ್ಗೆ ಮಾತಾಡುವ ಯೋಗ್ಯತೆ ಕುಮಾರಸ್ವಾಮಿಗೆ ಇಲ್ಲ. ಮೊದಲು ನನಗೆ ಎಷ್ಟು ದುಡ್ಡು ಕೊಟ್ಟೀದ್ದೀರಿ ಅದನ್ನ ಹೇಳಿ? ಅಥವಾ ಬಹಿರಂಗ ಚರ್ಚೆಗೆ ಬನ್ನಿ ಎಂದು ಸವಾಲು ಹಾಕಿದ್ದಾರೆ. ಎಲ್ಲಿಯವರೆಗು ಕುಮಾರಸ್ವಾಮಿ ಅವರು ತಮ್ಮ ನಡವಳಿಕೆ ಬದಲಾವಣೆ ಮಾಡಿಕೊಳ್ಳುವುದಿಲ್ಲವೋ? ಅಲ್ಲಿಯವರೆಗು ಈ ಪಕ್ಷ ಬೆಳೆಯಲು ಆಗೋದಿಲ್ಲ ಎಂದರು. ಅಲ್ಲದೆ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾರೆ ಎಂದಿರುವ ಕುಮಾರಸ್ವಾಮಿ ಅವರೇ ನನಗು ದೇವರ ಮೇಲೆ ನಂಬಿಕೆ ಇದೆ’ ನೋಡಿಕೊಳ್ಳಲಿ ಬಿಡಿ ಎಂದರು.