ಅ.5 ರಂದು ಕಬ್ಬು ಬೆಳೆಗಾರರಿಂದ ವಿಧಾನಸೌಧಕ್ಕೆ ಮುತ್ತಿಗೆ: ಕುರುಬೂರು ಶಾಂತಕುಮಾರ್

1 min read

ಮೈಸೂರು : ಸೆ.30- ಕಬ್ಬು ಬೆಳೆಗಾರರ ಮೇಲಿನ ಶೋಷಣೆ ಖಂಡಿಸಿ ಅ. 5ರಂದು ಕಬ್ಬು ಬೆಳೆಗಾರರಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ರಾಜ್ಯ ಕಬ್ಬುಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಹೇಳಿದರು.

ಮೈಸೂರಿನ ಪತ್ರಕರ್ತರ ಭವನದಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಆದಾಯವನ್ನು ಡಬಲ್ ಮಾಡುತ್ತೇನೆ ಎಂದ ಕೇಂದ್ರ ಸರ್ಕಾರ ಕನಿಷ್ಠ ಉತ್ಪಾದನಾ ವೆಚ್ಚ ನೀಡುವಲ್ಲಿ ವಿಫಲವಾಗಿದೆ. ಹಾಗಾಗಿ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಅ. 5ರಂದು ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ .

ಹಳ್ಳಿ ಹಳ್ಳಿಗಳಿಂದ ಕಬ್ಬು ಬೆಳೆಗಾರರು ಹೋರಾಟಕ್ಕೆ ಬರುವಂತೆ ಮನವಿ ಮಾಡಿದರು. ಕೇಂದ್ರ ಸರ್ಕಾರ‌‌ ಕಳೆದ ಎರಡು ವರ್ಷಗಳಿಂದ ಕಬ್ಬಿನ ಎಫ್ ಆರ್ ಪಿ ದರ ನಿಗದಿ ಮಾಡಿಲ್ಲ. ಸಕ್ಕರೆ ಕಾರ್ಖಾನೆ ಮಾಲೀಕರ ಒತ್ತಡಕ್ಕೆ ಮಣಿದು ರೈತರಿಗೆ ಅನ್ಯಾಯ ಮಾಡುತ್ತಿದೆ. ಸಕ್ಕರೆ ಇಳುವರಿ, ತೂಕ
ಹಾಗೂ ಹಣ ನೀಡುವಲ್ಲಿ ಮೋಸ ಆಗುತ್ತಿದೆ. ಕಬ್ಬು ಬೆಳಗಾರರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೇಂದ್ರ‌ ಹಾಗೂ ರಾಜ್ಯ ಸರ್ಕಾರಗಳು ರೈತರನ್ನು ವಂಚಿಸುತ್ತಿವೆ ಎಂದು ಆರೋಪಿಸಿದರು.

About Author

Leave a Reply

Your email address will not be published. Required fields are marked *