ನಗರಪಾಲಿಕೆಯಲ್ಲಿ ಪೌರಕಾರ್ಮಿಕರಿಗೆ ʻಮುಖ ಗುರುತಿಸುವಿಕೆ ಆಧಾರಿತ ಹಾಜರಾತಿ ವ್ಯವಸ್ಥೆʼ ಜಾರಿಗೆ, ನಾಳೆ ಸಚಿವ ಎಸ್.ಟಿ.ಸೋಮಶೇಖರ್ ರಿಂದ ಚಾಲನೆ
1 min readಮೈಸೂರು,ಅ.5-ಮೈಸೂರು ಮಹಾನಗರ ಪಾಲಿಕೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರ ಹಾಜರಾತಿ ಪದ್ಧತಿಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ಉದ್ದೇಶದಿಂದ ಪಾಲಿಕೆಯು ಮುಖ ಗುರುತಿಸುವಿಕೆ ಆಧಾರಿತ ಹಾಜರಾತಿ ವ್ಯವಸ್ಥೆ (Facial Recognisation Based Attendance System) ಅನ್ನು ಜಾರಿಗೆ ತರುತ್ತಿದೆ.
ಇದೂ ರಾಜ್ಯದಲ್ಲೇ ಪ್ರಪ್ರಥಮವಾಗಿ ಜಾರಿಗೆ ತರಲಾಗುತ್ತಿದೆ. ಸದರಿ ತಂತ್ರಾಂಶದ ಮೂಲಕ ಪೌರಕಾರ್ಮಿಕರ ಹಾಜರಾತಿ ಪಡೆಯುವ ತಂತ್ರಾಂಶಕ್ಕೆ ಅ.6 ರಂದು (ನಾಳೆ) ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಲಿದ್ದಾರೆ.
ನಾಳೆ ಬೆಳಿಗ್ಗೆ 11 ಗಂಟೆಗೆ ಚಾಮುಂಡಿಪುರಂನಲ್ಲಿರುವ ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ತಗಡೂರು ರಾಮಚಂದ್ರ ರಾವ್ ಉದ್ಯಾನವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.