ಮೈಸೂರಲ್ಲಿ ಮತ್ತೊಂದು ಮೆಗಾ ಲೋಕ ಅದಾಲತ್!

1 min read

ಮೈಸೂರು : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘’ಮೆಗಾ ಲೋಕ್ ಅದಾಲತ್” ಕಾರ್ಯಕ್ರಮವನ್ನು ಅಕ್ಟೋಬರ್ 23ರಂದು ರಂದು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ದೇವರಾಜ ಭೂತೆ ಅವರು ತಿಳಿಸಿದ್ದಾರೆ.
ಲೋಕ್ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು, ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಆನ್‌ಲೈನ್, ವೀಡಿಯೋ ಕಾನ್ಛರೆನ್ಸ್, ಇ-ಮೇಲ್, ಎಸ್.ಎಮ್.ಎಸ್., ವಾಟ್ಸ್ ಆಪ್, ಎಲೆಕ್ಟ್ರಾನಿಕ್ ಮೋಡ್, ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಹಾಗೂ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಎ.ಡಿ.ಆರ್. ಸೆಂಟರ್, ಮಳಲವಾಡಿ, ಜಯನಗರ, 5ನೇ ಕ್ರಾಸ್, ಮೈಸೂರು-14 ದೂರವಾಣಿ ಸಂಖ್ಯೆ: 0821 2330130, Mail ID: mysurudlsa@gmail.com ಹಾಗೂ ತಾಲ್ಲೂಕು ಕಾನೂನು ಸೇವೆಗಳ ಸಮಿತಿಗಳ ಸದಸ್ಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *