ಶಿಲ್ಪಾನಾಗ್ ಅವರ ರಾಜೀನಾಮೆ ಒಪ್ಪಬಾರದೆಂದು ಮನವಿ ಸಲ್ಲಿಸಿದ್ದೇನೆ: ಎಸ್.ಟಿ.ಸೋಮಶೇಖರ್

1 min read

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶಿಲ್ಪಾನಾಗ್ ಅವರ ರಾಜೀನಾಮೆಯನ್ನು ಒಪ್ಪಬಾರದೆಂದು ಮುಖ್ಯಮಂತ್ರಿಗಳಿಗೆ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ಮನವಿಯನ್ನು ಮಾಡಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.

ಶುಕ್ರವಾರ ಮೈಸೂರು ಮಹಾನಗರ ಪಾಲಿಕೆ ಆವರಣದಲ್ಲಿ ಪಾಲಿಕೆ ಸದಸ್ಯರು ಸಲ್ಲಿಸಿದ ಮನವಿಯನ್ನು ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಯ ರಾಜೀನಾಮೆಯನ್ನು ಒಪ್ಪಿಕೊಂಡರೆ ಅವರಿಗೆ ದ್ರೋಹ ಮಾಡಿದಂತೆ ಆಗುತ್ತದೆ. ಒಳ್ಳೆಯ ಅಧಿಕಾರಿಗಳಿಗೆ ಆತ್ಮಸ್ಥೈರ್ಯ ತುಂಬಬೇಕು. ಅವರು ಮನಸ್ಸುನೊಂದು ರಾಜೀನಾಮೆ ನೀಡಿದ್ದು, ಅದನ್ನು ಸ್ವೀಕರಿಸಬಾರದು ಎಂದು ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತರಲಾಗಿದೆ ಎಂದರು.

ಮಹಾನಗರ ಪಾಲಿಕೆಯ ಆಯುಕ್ತರಾದ ಶಿಲ್ಪನಾಗ್ ಅವರಿಗೆ ಪಾಲಿಕೆಯ ಕೆಲಸ ಮಾಡಲು ಸೂಚಿಸಲಾಗಿದ್ದು, 2 ದಿನಗಳ ನಂತರ ಇದರ ಬಗ್ಗೆ ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ. ಎಂದು ಇದೆ ಸಂದರ್ಭದಲ್ಲಿ ತಿಳಿಸಿದರು.

ಶಾಸಕರಾದ ಜಿ.ಟಿ.ದೇವೆಗೌಡ, ತನ್ವೀರ್ ಸೇಠ್, ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್.ನಾಗೇಂದ್ರ, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ಅಪ್ಪಣ್ಣ, ಪಾಲಿಕೆ ಸದಸ್ಯ ಅಯೂಬ್ ಖಾನ್ ಸೇರಿದಂತೆ ಇತರರು ಹಾಜರಿದ್ದರು.

About Author

Leave a Reply

Your email address will not be published. Required fields are marked *