ಶಿಲ್ಪಾನಾಗ್ ರಾಜಿನಾಮೆಯನ್ನು ಸರ್ಕಾರ ಯಾವ ಕಾರಣಕ್ಕೂ ಅಂಗೀಕಾರ ಮಾಡುವುದಿಲ್ಲ: ಸಚಿವ ಸೋಮಶೇಖರ್
1 min readಮೈಸೂರು: ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀಮತಿ ಶಿಲ್ಪಾನಾಗ್ ಅವರು ಅತ್ಯಂತ ದಕ್ಷತೆಯಿಂದ ಪ್ರಾಮಾಣಿಕತೆಯಿಂದ ಮೈಸೂರಿನಲ್ಲಿ ಉತ್ತಮವಾಗಿ ಕೆಲಸ ಮಾಡಿದ್ದಾರೆ. ಅವರ ರಾಜಿನಾಮೆಯನ್ನು ಸರ್ಕಾರ ಯಾವ ಕಾರಣಕ್ಕೂ ಅಂಗೀಕಾರ ಮಾಡುವುದಿಲ್ಲ. ಈ ವಿಚಾರವಾಗಿ ಮಾನ್ಯ ಮುಖ್ಯಮಂತ್ರಿಯವರಿಗೂ ಮಾತನಾಡುತ್ತೇನೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಎಸ್.ಟಿ.ಸೋಮಶೇಖರ್ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.
ಶ್ರೀಮತಿ ಶಿಲ್ಪಾನಾಗ್ ಅವರು ಸೇವೆಯಲ್ಲಿ ಮುಂದುವರಿಯುವಂತೆ ಮನವೊಲಿಸಲಾಗುವುದು. ಅವರೊಂದಿಗೆ ದೂರವಾಣಿ ಮೂಲಕ ಮಾತನಾಡುತ್ತೇನೆ. ಶುಕ್ರವಾರ ನಾನು ಮೈಸೂರು ಪ್ರವಾಸ ಕೈಗೊಂಡಿದ್ದು, ಆ ವೇಳೆ ಖುದ್ದು ಭೇಟಿಯಾಗಿ ಮಾತನಾಡುತ್ತೇನೆ.