ಕೊರೊನಾಗೆ ಕಡಿವಾಣ ಹಾಕಲು ಮೈಸೂರಿನಲ್ಲಿ ಸಚಿವದ್ವಯರಿಂದ ಸಭೆ
1 min readಮೈಸೂರು: ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಕೊರೊನಾಗೆ ಕಡಿವಾಣ ಹಾಕಲು ಮೈಸೂರಿನಲ್ಲಿ ಸಚಿವದ್ವಯರಿಂದ ಇಂದು ಸಭೆ ಜರುಗಿತು.
ಮೈಸೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಆಯೋಜನೆಗೊಂಡಿದ್ದ ಸಭೆಯಲ್ಲಿ ಕೊರೊನಾ ನಿಯಂತ್ರಣ ಮಾಡಲು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಪರಿಶೀಲನೆ ನಡೆಯಿತು.
ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ಸಭೆ ಆಯೋಜನೆಗೊಂಡಿತ್ತು. ಶಾಸಕರಾದ ನಾಗೇಂದ್ರ, ಅಶ್ವಿನ್ ಕುಮಾರ್, ಅನಿಲ್ ಚಿಕ್ಕ ಮಾದು, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಪರಿಮಳ ಶಾಮ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ನಗರ ಪೊಲೀಸ್ ಆಯುಕ್ತ ಚಂದ್ರಗುಪ್ತ, ನಗರಪಾಲಿಕೆ ಆಯುಕ್ತೆ ಶಿಲ್ಪನಾಗ್ ಸಭೆಯಲ್ಲಿ ಭಾಗಿಯಾಗಿದ್ದರು.