ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲ ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ: ಯತ್ನಾಳ್ ವಾಗ್ದಾಳಿ

1 min read

ಮೈಸೂರು: ದಕ್ಷಿಣೆ ಕಾಸಿಗೆ ಆಸೆ ಬಿದ್ದು ಕೆಲ ಮಠಾಧೀಶರು ಸಿಎಂ ಪರ ಮಾತನಾಡುತ್ತಿದ್ದಾರೆ ಅಂತ ಚಾಮುಂಡಿ ಬೆಟ್ಟದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಲವ್ ಜಿಹಾದ್‌ ತಡೆಯಲು ಮಠಾಧೀಶರು ಮುಂದಾಗಬೇಕು. ಕೆಟ್ಟವರಿಗೆ ಬುದ್ದಿ ಹೇಳುವ ಕೆಲಸ ಮಾಡಬೇಕು. ಅದನ್ನು ಬಿಟ್ಟು ಸಿಎಂ ಬದಲಾವಣೆ ಮಾಡಿದ್ರೆ ಬೀದಿಗೆ ಬರ್ತೀವಿ ಅನ್ನೋದು ಸರಿಯಲ್ಲ. ಸಿಎಂ ಕುಟುಂಬದಿಂದ ಲಿಂಗಾಯತ ಸಮಾಜಕ್ಕೆ ಕೆಟ್ಟ ಹೆಸರು ಬಂದಿದೆ. ಇದರ ಬಗ್ಗೆ ಮಾತನಾಡುವ ಬದಲು ಭ್ರಷ್ಟರ ಪರವಾಗಿ ಮಠಾಧೀಶರು ಮಾತನಾಡಬಾರದು‌. ನಿಮಗೆ ಅಷ್ಟೊಂದು ರಾಜಕೀಯ ಹುಚ್ಚು ಇದ್ರೆ ಖಾವಿ ತೆಗೆದು ಖಾದಿ ಧರಿಸಿ ಬನ್ನಿ ಅಂತ ಸಿಎಂ ಪರ ಬ್ಯಾಟ್ ಬೀಸುತ್ತಿರುವ ಮಠಾಧೀಶರ ವಿರುದ್ದ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಯಡಿಯೂರಪ್ಪ ಎಲ್ಲ ಸಮುದಾಯಗಳ ನಾಯಕತ್ವ ಮುಗಿಸುತ್ತಿದ್ದಾರೆ. ಲಿಂಗಾಯತ ಸಮುದಾಯದಲ್ಲಿ ಯಾವೊಬ್ಬ ನಾಯಕನನ್ನ ನೀವು ಬೆಳೆಯಲು ಬಿಡುತ್ತಿಲ್ಲ. ರಮೇಶ್ ಜಾರಕಿಹೊಳಿಗೆ ಅವರಿಗೆ ಅನ್ಯಾಯ ಆಗಿದೆ‌. ಅವರ ಕೇಸ್‌ನಲ್ಲಿ ಬಿ ರಿಪೋರ್ಟ್ ಹಾಕುವ ಅವಕಾಶ ಇದ್ದರು ಬಿಡ್ತಿಲ್ಲ. ಬ್ಲಾಕ್ ಮೇಲ್ ಮಾಡುವ ಸಲುವಾಗಿಯೇ ಆ ಕೇಸನ್ನ ಇಟ್ಟುಕೊಳ್ಳಲಾಗಿದೆ. ವಾಲ್ಮೀಕಿ ಸಮುದಾಯದ ಲೀಡರ್‌ಶಿಪ್‌ ಮುಗಿಸುವ ಹುನ್ನಾರ ನಡೆದಿದೆ. ಕೆ.ಎಸ್ ಈಶ್ವರಪ್ಪ ಖಾತೆಗೆ ಸಂಬಂಧಪಟ್ಟ 2 ಸಾವಿರ ಕೋಟಿ ಕಾಮಗಾರಿ. ಮುಖ್ಯಮಂತ್ರಿ ತಮ್ಮ ಬೀಗನಿಗೆ ಕೊಡಿಸಿಕೊಂಡ್ರು. ಹೀಗೆ ಲಿಂಗಾಯತ, ಕುರುಬ, ನಾಯಕ, ಎಲ್ಲ ನಾಯಕನ್ನ ಮೋಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಇವರು ಒಬ್ಬರೇ ಇರಬೇಕು ಎಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದರು.

ಬಿಜೆಪಿ ಹೈಕಮಾಂಡ್ ಯತ್ನಾಳ್‌ಗೆ ಮಾಹಿತಿ ನೀಡುತ್ತಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪ:

ಆಗಿದ್ರೆ ಕಾಂಗ್ರೆಸ್‌ನವ್ರು ಕತ್ತೆ ಕಾಯ್ತ ಇದ್ದಾರಾ? ಭ್ರಷ್ಟರ ಜೊತೆ ವಿಪಕ್ಷಗಳು ಕೈ ಜೋಡಿಸಿವೆ. ಶೋಭ ಡೆವಲಪರ್ಸ್‌‌ನಲ್ಲಿ ಯಾರ್ಯಾರು ಪಾಲುದಾರರು. ಇದನ್ನ ಮಾದ್ಯಮಗಳು ತನಿಖೆ ಮಾಡಬೇಕು. ರಾಜ್ಯದಲ್ಲಿ ವಿರೋಧ ಪಕ್ಷಗಳು ಸತ್ತು ಹೋಗಿವೆ. ಬಿ ಎಸ್ ಯಡಿಯೂರಪ್ಪ ಜೊತೆ ಎಲ್ಲರೂ ಶಾಮೀಲಾಗಿದ್ದಾರೆ. ಅವರಿಗೂ ಭ್ರಷ್ಟಾಚಾರದಲ್ಲಿ ಪಾಲಿದೆ. ಈಗಾಗಿ ಅವರು ಯಾರು ಯಡಿಯೂರಪ್ಪ ವಿರುದ್ದ ಮಾತಾನಾಡುತ್ತಿಲ್ಲ. ಅವರಿಗೂ ಯಡಿಯೂರಪ್ಪ ಮುಂದುವರಿಯಬೇಕು ಅಂತ ಕಾಂಗ್ರೆಸ್ ನಾಯಕರ ವಿರುದ್ದ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಮತ್ತೆ ಗುಡುಗಿದ ಯತ್ನಾಳ್:

ರಾಜ್ಯವನ್ನು ಲೂಟಿ ಮಾಡುತ್ತಿರುವ ದುಷ್ಟರ ಸಂಹಾರ ಆಗಬೇಕು. ರಾಜ್ಯದಲ್ಲಿ ಅನ್‌ಲಾಕ್ ಶುರುವಾದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದರ್ಶನಕ್ಕೆ ಬಂದಿದ್ದೇನೆ.

ದುಷ್ಟರ ಸಂಹಾರ ಮಾಡು ಅಂತ ತಾಯಿ ಬಳಿ ಬೇಡಿಕೊಂಡಿದ್ದೇನೆ. ಯಾರು ಅಪಾರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೋ, ರಾಜ್ಯವನ್ನು ಲೂಟಿ ಮಾಡುತ್ತಿದ್ದಾರೋ, ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೋ ಅವರೆಲ್ಲರೂ ದುಷ್ಟರು.

ಅತಿ ಶೀರ್ಘದಲ್ಲೇ ದುಷ್ಟ ಸಂಹಾರ ಆಗುವ ವಿಶ್ವಾಸವೂ ಇದೆ ಎಂದರು.

ಕೆಟ್ಟವರೊಂದಿಗೆ ಒಳ್ಳೆಯವರೂ ಸೇರಿಕೊಂಡಿದ್ದಾರೆ ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ವಿಳಂಬ ಆಗುತ್ತಿದೆ. ಕುರುಕ್ಷೇತ್ರ ಯುದ್ಧದಲ್ಲಿ ಕೌರವರೊಂದಿಗೆ ಭೀಷ್ಮ, ದ್ರೋಣಾಚಾರ್ಯರಂತಹ ಒಳ್ಳೆಯವರೂ ಇದ್ದರು. ಒಮ್ಮೊಮ್ಮೆ ಹೀಗೆಲ್ಲ ಆಗುತ್ತೆ.

ಆದರೆ ದುಷ್ಟ ಸಂಹಾರ ಆಗಲೇಬೇಕಲ್ವ ? ಕೆಟ್ಟವರಿಗೆ ಕೊನೆಗಾಲ ಅಂತ ಇದ್ದೇ ಇರುತ್ತೆ. ಅಲ್ಲಿವರೆಗೂ ಕಾಯೋಣ. ಹೈಕಮಾಂಡ್ ಕೂಡ ಮುಖ್ಯಮಂತ್ರಿ ಬದಲಾವಣೆಗೆ ಪರಿಶೀಲನೆ ಮಾಡುತ್ತಿದೆ ಎಂದರು.

ಬಿ‌.ವೈ. ವಿಜಯೇಂದ್ರ ವಿರುದ್ಧ ವಾಗ್ದಾಳಿ: ಸಿಎಂ ನಿವಾಸ ಕಾವೇರಿ ಹಿಂಭಾಗದಲ್ಲಿ ಗೆಸ್ಟ್‌ಗೌಸ್‌ ಇದೆ. ಇವರ ಎಲ್ಲ ಡೀಲ್‌ಗಳೂ ಅಲ್ಲೇ ನಡೆಯೋದು. ಸಿಸಿಬಿ ಪೊಲೀಸರು ಅಲ್ಲಿಗೆ ಯಾಕೆ ರೈಡ್ ಮಾಡಲ್ಲ ? ಅಂತ ಯತ್ನಾಳ್ ಆರೋಪಿಸಿದ್ದಾರೆ.

About Author

Leave a Reply

Your email address will not be published. Required fields are marked *