ಶಾಸಕ ಭೀಮನಾಯ್ಕ್‌ಗೆ ಕೊರೊನಾ ಪಾಸಿಟಿವ್
1 min readಬೆಂಗಳೂರು: ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ್ ಅವರಿಗೆ ಕೊರೊನಾ ಪಾಸಿಟಿವ್ ಆಗಿದೆ. ಕಳೆದ ಐದಾರು ದಿನಗಳಿಂದ ಮಸ್ಕಿ, ಬಸವಕಲ್ಯಾಣ, ಬೆಳಗಾವಿ ಉಪ ಚುನಾವಣಾ ಪ್ರಚಾರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರ ಜೊತೆ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದರು.
ಈ ವೇಳೆ ಶಾಸಕರು ತಮ್ಮ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು, ನನಗೆ ಈ ದಿನ ಕೊರೊನಾ ಸೋಂಕಿಗೆ ಒಳಪಟ್ಟಿದ್ದೇನೆ, ಕಳೆದ ಐದು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರೆಲ್ಲರೂ ಕೊರೊನಾ ಪರೀಕ್ಷೆ ಮಾಡಿಕೊಳ್ಳಿ ಎಂದು ಕಾಂಗ್ರೆಸ್ ಶಾಸಕ ಮನವಿ ಮಾಡಿಕೊಂಡಿದ್ದಾರೆ.
ಮಸ್ಕಿ, ಬಸವಕಲ್ಯಾಣ, ಬೆಳಗಾವಿ ಲೋಕಸಭೆ ಉಪ ಚುನಾವಣೆಯ ಪ್ರಚಾರದಲ್ಲಿ ಕೈ ಶಾಸಕ ಭೀಮನಾಯ್ಕ್ ಭಾಗಿಯಾಗಿದ್ದರು. ಸದ್ಯ ಹೋಮ್ ಐಸೋಲೇಷನ್ ಆಗಿದ್ದಾರೆ.