ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಮಂದಿ ಸಾವು: ಆಕ್ಸಿಜನ್ ಸಿಗದೆ ಬಲಿಯಾಗಿರುವ ಶಂಕೆ
1 min readಚಾಮರಾಜನಗರ: ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 20ಕ್ಕೂ ಹೆಚ್ಚು ಮಂದಿ ಕೊರೋನಾ ಸೋಂಕಿತರು ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಈ ಬಗ್ಗೆ ಆರೋಗ್ಯಾಧಿಕಾರಿಗಳು ಖಚಿತಪಡಿಸಿದ್ದಾರೆ.
ಇನ್ನು ಆಕ್ಸಿಜನ್ ಕೊರತೆಯಿಂದ ಇಷ್ಟು ಮಂದಿ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಅಧಿಕೃತವಾಗಿ ಯಾವುದೇ ಮಾಹಿತಿ ಜಿಲ್ಲಾಡಳಿತ ನೀಡಿಲ್ಲ.
ಇನ್ನು ಸಾವಿನ ಸಂಖ್ಯೆ ಏರುತ್ತಿದ್ದಂತೆ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ದೌಡಾಯಿಸಿದ್ದಾರೆ. ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಹೆಚ್ಚುವರಿ ಎಸ್ಪಿ ಅನಿತಾಹದ್ದಣ್ಣನವರ್ ಸ್ಥಳಕ್ಕೆ ಆಗಮಿಸಿದ್ದಾರೆ.
ಮೃತರ ಕುಟುಂಬಸ್ಥರು ಆಸ್ಪತ್ರೆ ಮುಂದೆ ಜಮಾಯಿಸುತ್ತಿದ್ದಾರೆ.