ಅಧಿಕಾರಿಗಳನ್ನ ಟ್ರಾನ್ಸಫರ್ ಮಾಡೋ ತಾಕತ್ತಿದ್ದರೆ ಅಂತಹ ತಾಕತ್ತು ನನಗೆ ಬೇಡ: ಪ್ರತಾಪ್ ಸಿಂಹ

1 min read

ಮೈಸೂರು: ಅಧಿಕಾರಿಗಳನ್ನ ಟ್ರಾನ್ಸಫರ್ ಮಾಡೋ ತಾಕತ್ತಿದ್ದರೆ ಅಂತಹ ತಾಕತ್ತು ನನಗೆ ಬೇಡ ಅಂತ ಶಾಸಕ ಜಿಟಿ. ದೇವೇಗೌಡರಿಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಒಬ್ಬ ಸಂಸದನಾಗಿ ನಾನು ನನ್ನ ಕೆಲಸದಲ್ಲಿ ತಾಕತ್ತು ತೋರಿಸಿದ್ದೆನೆ. ಮೈಸೂರಿಗೆ ನಾನು ಹೊರಗಿನವನು. ಆದರೂ ಮೊದಲ ಚುನಾವಣೆಯಲ್ಲಿ ಮೈಸೂರು – ಕೊಡಗಿನ ಜನ ಮೂವತ್ತು ಸಾವಿರ ಅಂತರದ ಮತಗಳಿಂದ ಗೆಲ್ಲಿಸಿದ್ರು. ನನ್ನ ತಾಕತ್ತು ತೋರಿಸಿ ಒಳ್ಳೆಯ ಕೆಲಸ ಮಾಡಿದ್ದೆ. ನನಗೆ 2ನೇ ಚುನಾವಣೆಯಲ್ಲಿ ಒಂದು ಲಕ್ಷದ ನಲವತ್ತು ಸಾವಿರ ಮತಗಳಿಂದ ಗೆಲ್ಲಿಸಿದ್ರು. ಇದಕ್ಕಿಂತಲೂ ನಾನು ಯಾವ ತಾಕತ್ತು ತೋರಿಸಬೇಕು.

ಡಿಸಿಯನ್ನೋ ಅಥವಾ ಇನ್ನಾವುದೋ ಅಧಿಕಾರಿಯನ್ನ ವರ್ಗಾವಣೆ ಮಾಡಿಸೋದು ರಾಜಕಾರಣಿಗಳಿಗೆ ಕಾಮನ್. ನನ್ನ ದೃಷ್ಟಿಯಲ್ಲಿ ಅದು ಅತ್ಯಂತ ಸಣ್ಣ ಕೆಲಸ. ಅಂತಹ ಸಣ್ಣ ಕೆಲಸವನ್ನ ನಾನು ಮಾಡೋದಿಲ್ಲ. ಸರ್ಕಾರ ಕೊಟ್ಟ ಅಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತೆನೆ ಅಂತ ಮೈಸೂರಿನಲ್ಲಿ ಮೈಸೂರು – ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.

ಜಿಟಿ ದೇವೇಗೌಡ್ರು ನನಗೆ ತಂದೆ ಇದ್ದಂತೆ

ಸಾರಾ ಮಹೇಶ್‌ರನ್ನ ಹೊಗಳಿದ್ದು ದೇವೇಗೌಡ‌ರಿಗೆ ಇಷ್ಟವಾಗಿಲ್ಲ ಅನ್ಸುತ್ತೆ. ಹೀಗಾಗಿ ನನ್ನ ವಿರುದ್ಧ ಮಾತ್ನಾಡಿದ್ದಾರೆ. ಜಿಟಿ ದೇವೇಗೌಡ್ರು ನನಗೆ ತಂದೆ ಇದ್ದಂತೆ. ಅವ್ರು ಹರೀಶ್‌ಗೌಡರನ್ನ ಹೇಗೆ ನೋಡಿಕೊಂಡಿದ್ದಾರೋ ಹಾಗೇ ನನ್ನನ್ನ ನೋಡಿಕೊಂಡಿದ್ದಾರೆ. ರಾಜಕೀಯದಲ್ಲಿ ನನ್ನನ್ನು ಬೈಯುವ ಹಕ್ಕು ಜಿ.ಟಿ ದೇವೇಗೌಡ್ರಿಗೆ ಇದೆ. ಅವ್ರು ಬೈಯುವುದನ್ನ ನಾನು ಪ್ರೀತಿಯಿಂದಲೇ ಸ್ವೀಕರಿಸಿಸುತ್ತೆನೆ.

ನಾನು ಹಳ್ಳಿಗಳಿಗೆ ಭೇಟಿ ಕೊಟ್ಟಿದ್ದಾಗ ಶಾಸಕರ ಕಾರ್ಯವೈಖರಿ ನೋಡಿದ್ದೆನೆ. ಕೆ.ಆರ್ ನಗರಕ್ಕೆ ಭೇಟಿ ಕೊಟ್ಟ ಸಂದರ್ಭದಲ್ಲಿ. ಸಾರಾ ಮಹೇಶ್‌ ಜಿಲ್ಲೆಗೆ ಮೇಲ್ಪಂಕ್ತಿಯಾಗುವಂತೆ ಕೆಲಸ ಮಾಡಿದ್ದಾರೆ ಅಂತ ಹೇಳಿದ್ದು ನಿಜ. ಇದರಲ್ಲಿ ಯಾರನ್ನು ಹೊಗಳುವ. ತೆಗಳುವು ಉದ್ದೇಶವಿಲ್ಲ. ಇದನ್ನ ಅಪಾರ್ಥ ಮಾಡಿಕೊಂಡರೆ ನಾನೇನು ಮಾಡಲು ಸಾಧ್ಯವಿಲ್ಲ.

ಡಿಸಿಯನ್ನ ಕಟಕಟೆಗೆ ನಿಲ್ಲಿಸುತ್ತಿದ್ರು

ಚಾಮರಾಜನಗರ ಘಟನೆಯಿಂದ ಡಿಸಿಯನ್ನ ಕಟಕಟೆಗೆ ನಿಲ್ಲಿಸುತ್ತಿದ್ರು. ಆವಾಗೆಲ್ಲಾ ಇವ್ರು ಎಲ್ಲಿ ಹೋಗಿದ್ರು..? ಅಂತ ಜಿಟಿ ದೇವೇಗೌಡರಿಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ನಿಡಿದ್ದಾರೆ.

ಆಗ ಡಿಸಿ ಪರವಾಗಿ ಧ್ವನಿ ಎತ್ತಿದ್ದು ನಾನೇ. ಡಿಸಿ ಕಾರ್ಯ ವೈಖರಿಗೆ ಎಲ್ಲರೂ ಅಸಮಾಧಾನ ವ್ಯಕ್ತಪಡಿಸಿದರು. ನಾನು ಈಗ ಹೇಳಿರೋದು, ಗ್ರಾಮೀಣಾ ಭಾಗದಲ್ಲಿ ಕೊರೊನಾ ಹೆಚ್ಚಾಗಿದೆ. ಜನ ಕಷ್ಟದಲ್ಲಿದ್ದಾರೆ, ಹಳ್ಳಿಗಳಿಗೆ ಹೋಗಿ ಅಂದೆ. ಹಳ್ಳಿಗಳಿಗೆ ಹೋಗಿ ಅಂತಾ ಹೇಳಿದ್ದೆ ತಪ್ಪಾ…? ಅಂತ ಮೈಸೂರಿನಲ್ಲಿ ಸಂಸದ ಪ್ರತಾಪ್ ಪ್ರಶ್ನೆ ಮಾಡಿದ್ದಾರೆ.

About Author

Leave a Reply

Your email address will not be published. Required fields are marked *