ಚಾಮರಾಜನಗರದಲ್ಲಿ ನಡೆದಿರುವ ಘಟನೆ ದುರದೃಷ್ಟಕರ: ಸಂಸದ ವಿ. ಶ್ರೀನಿವಾಸ್ ಪ್ರಸಾದ್‌ ಹೇಳಿಕೆ

1 min read

ಮೈಸೂರು:ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಇದಕ್ಕೆ ಆಮ್ಲಜನಕ ಕೊರತೆಯೇ ಕಾರಣ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಾಮರಾಜನಗರ ಜಿಲ್ಲಾಡಳಿತ ಈವರೆಗೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಇದೀಗ ಮೈಸೂರಿನಲ್ಲಿ ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್‌ ಹೇಳಿಕೆ ನೀಡಿದ್ದು ಜಿಲ್ಲೆಯಲ್ಲಿ ನಡೆದಿರುವ ಘಟನೆ ದುರದೃಷ್ಟಕರ ಎಂದಿದ್ದಾರೆ.

ಚಾಮರಾಜನಗರ ಜಿಲ್ಲಾಧಿಕಾರಿ ಜೊತೆ ನಿನ್ನೆ ರಾತ್ರಿ 9 ಗಂಟೆಯಲ್ಲಿ ಮಾತನಾಡಿದ್ದೆ. ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಅಂತ ಜಿಲ್ಲಾಧಿಕಾರಿ ಹೇಳಿದ್ದರು. ನಿನ್ನೆ‌ ಅಕ್ಸಿಜನ್ ಕೊರತೆ ಬಗ್ಗೆ ನನಗೆ ಜಿಲ್ಲಾಧಿಕಾರಿ ಮಾಹಿತಿ ನೀಡಿಲ್ಲ. ಸದ್ಯ ನನಗೆ ಇಷ್ಟೆ ಮಾಹಿತಿ ಗೊತ್ತಿರುವುದು. ನಾನು ಚಾಮರಾಜನಗರ ಹೋಗುತ್ತಿಲ್ಲ. ಕೋವಿಡ್ ಕಾರಣದಿಂದ ಅಲ್ಲಿ ಹೋಗಲು ಸಾಧ್ಯವಿಲ್ಲ. ಮಾಹಿತಿ ತರಿಸಿಕೊಳ್ಳುತ್ತಿದ್ದೇನೆ. ಮೈಸೂರಿನಿಂದ ಅಕ್ಸಿಜನ್ ಸಪ್ಲೈ ಆಗಿಲ್ಲ ಅಂತ ಅಷ್ಟೆ ಸದ್ಯಕ್ಕೆ ಗೊತ್ತಾಗಿದೆ ಎಂದರು.

ಮೊದಲನೇ ಅಲೆಯ ಸಂಧರ್ಭದಲ್ಲಿ ಕೇಂದ್ರ ಸರ್ಕಾರವೆ ಚಾಮರಾಜನಗರ ಕೋವಿಡ್ ನಿರ್ವಹಣೆ ಬಗ್ಗೆ ಮೆಚ್ವುಗೆ ವ್ಯಕ್ತಪಡಿಸಿತ್ತು. ಚಾಮರಾಜನಗರ ಒಂದೇ ಒಂದು ಪ್ರಕರಣ ದಾಖಲಾಗಿರಲಿಲ್ಲ. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವರೆ ಜಿಲ್ಲಾಧಿಕಾರಿ ಜೊತೆ ಪೋನ್ ನಲ್ಲಿ ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಸದ್ಯ ಈಗ ನಡೆದಿರು ಘಟನೆ ದುರದೃಷ್ಟಕರ. ಸಾವನಪ್ಪಿದ್ದವರ ಕುಟುಂಬಕ್ಕೆ ಪರಿಹಾರ ನೀಡಬೇಕು. ಹೆಚ್ಚಿನ ಪರಿಹಾರಕ್ಕೆ ನಾನು ಒತ್ತಾಯ ಮಾಡುತ್ತೇನೆ ಎಂದು ಸಂಸದರು ತಿಳಿಸಿದರು.

About Author

Leave a Reply

Your email address will not be published. Required fields are marked *