ಮೈಸೂರಲ್ಲಿ ಜೂ. 14ರ ನಂತರ ಲಾಕ್ ಡೌನ್ ಮುಂದುವರಿಕೆ
1 min readಮೈಸೂರು: ಮೈಸೂರಲ್ಲಿ ಪಾಸಿಟಿವ್ ರೇಟ್ ಹೆಚ್ಚಾಗಿರೋ ಕಾರಣ ಲಾಕ್ ಡೌನ್ ಮುಂದುವರಿಕೆ ಮಾಡಲಾಗುವುದು ಅಂತ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿಕೆ ನೀಡಿದ್ದಾರೆ.
ಮೈಸೂರಲ್ಲಿ ಜೂ. 14 ರ ನಂತರ ಒಂದು ವಾರ ಸಂಪೂರ್ಣ ಲಾಕ್ ಡೌನ್ ಮುಂದುವರಿಕೆ ಮಾಡಲಾಗುವುದು. ಯಾವುದಕ್ಕೆ ವಿನಾಯಿತಿ, ಸಮಯದ ನಿರ್ಬಂಧ ಎಲ್ಲವೂ ಇನ್ನೂ ಎರಡು ಮೂರು ದಿನದಲ್ಲಿ ಪ್ರಕಟ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನೂ ಎರಡು ದಿನದಲ್ಲಿ ಜಿಲ್ಲಾಧಿಕಾರಿ, ಜಿಲ್ಲಾ ವರಿಷ್ಠಾಧಿಕಾರಿ, ಜಿಲ್ಲಾ ಪಂಚಾಯಿತಿ ಮೂವರು ಒಂದೇ ಕಾರಿನಲ್ಲಿ ಮೈಸೂರು ಜಿಲ್ಲೆಯ ಎಲ್ಲಾ ಕ್ಷೇತ್ರಕ್ಕೆ ಹೋಗುತ್ತಾರೆ. ಮೂವರು ಉನ್ನತಾಧಿಕಾರಿಗಳು ಒಟ್ಟಿಗೆ ಜಿಲ್ಲಾ ಪ್ರವಾಸ ಮಾಡಿ ಪರಿಸ್ಥಿತಿ ಅಧ್ಯಯನ ಮಾಡುತ್ತಾರೆ ಅಂತ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.