ಮೈಸೂರು ಪಾಲಿಕೆಯ ಮೇಯರ್ ಚುನಾವಣೆಗೆ ದಿನಾಂಕ ಫಿಕ್ಸ್!
1 min readಮೈಸೂರು : ಪ್ರತಿಷ್ಠಿತ ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಚುನಾವಣೆಗೆ ದಿನಾಂಕ ನಿಗಧಿಯಾಗಿದ್ದು, ಆಗಸ್ಟ್ 25ಕ್ಕೆ ಚುನಾವಣೆ ದಿನಾಂಕ ನಿಗಧಿ ಮಾಡಲಾಗಿದೆ. ಮೇಯರ್ ಆಗಿದ್ದ ರುಕ್ಮಿಣಿ ಮಾದೇಗೌಡರ ಪಾಲಿಕೆ ಸದಸ್ಯತ್ವ ರದ್ದಾದ ಕಾರಣ ಖಾಲಿಯಾಗಿದ್ದ ಮೇಯರ್ ಸ್ಥಾನಕ್ಕೆ ಇದೀಗಾ ಚುನಾವಣೆ ನಡೆಯುತ್ತಿದ್ದು, ಮೇಯರ್ ಆಯ್ಕೆಗೆ ಚುನಾವಣೆ ದಿನಾಂಕ ಫಿಕ್ಸ್ ಆಗಿದೆ.
ಮೇಯರ್ ಆಯ್ಕೆ ಚುನಾವಣೆಗೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂದುವರಿಕೆ ಸಾಧ್ಯತೆಯಿದ್ದು, ಬಿಜೆಪಿ ಮಾತ್ರ ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದೆ.