ಡಿಸಿ ರೋಹಿಣಿ ಸಿಂಧೂರಿ ವರ್ಗಾವಣೆಗೆ ಕಾರ್ಪೊರೇಟರ್ ಏಕಾಂಗಿ ಪ್ರತಿಭಟನೆ
1 min readಮೈಸೂರು: ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಮಾಡಿ ಅಂತ ಪಾಲಿಕೆಯ ಕಾರ್ಪೊರೇಟರ್ ಒಬ್ಬರು ಏಕಾಂಗಿಯಾಗಿ ಪ್ರತಿಭಟಿಸಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ಕಚೇರಿ ಬಳಿ ನಗರ ಪಾಲಿಕೆ ಕಾರ್ಪೊರೇಟರ್ ಲೋಕೇಶ್(ಪಿಯಾ) ಪ್ರತಿಭಟನೆ ನಡೆಸುತ್ತಿದ್ದಾರೆ. ಡಿಸಿ ರೋಹಿಣಿ ಸಿಂಧೂರಿ ಫ್ಲೆಕ್ಸ್ ಹಿಡಿದು ಜಿಲ್ಲಾಧಿಕಾರಿ ವರ್ಗಾವಣೆಗೆ ಮೌನ ಪ್ರತಿಭಟನೆ ಮಾಡಿದ್ದಾರೆ.