ಕೋವಿಡ್ ಮಿತ್ರಕ್ಕೆ ಮೊದಲ ಆದ್ಯತೆ ನೀಡಿ: ರೋಹಿಣಿ ಸಿಂಧೂರಿ

1 min read

ಮೈಸೂರು: ಕೋವಿಡ್ ಮಿತ್ರದ ಬಗ್ಗೆ ಹೆಚ್ಚು ಪ್ರಚಾರ ಮಾಡಲು ಮೊದಲ ಆದ್ಯತೆ ನೀಡಿ. ಇದಕ್ಕಾಗಿ ಆಶಾಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಸೇರಿದಂತೆ ಅಧಿಕಾರಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಅಧಿಕಾರಿಗಳಿಗೆ ತಿಳಿಸಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಕೋವಿಡ್ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಕೋವಿಡ್ ಮಿತ್ರಕ್ಕೆ ಬಂದು ಹೋಗುವವರು ಪಂಚಸೂತ್ರಗಳನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು. ಇದಕ್ಕಾಗಿ ಅಂಗನವಾಡಿ ಹಾಗೂ ಆಶಾಕಾರ್ಯಕರ್ತರನ್ನು ಬಳಸಿಕೊಳ್ಳಿ. ಕೋವಿಡ್ ಮಿತ್ರದಲ್ಲಿ ಕೊಡುತ್ತಿರುವ ಮೇಡಿಷನ್ ಅನ್ನು ಕಟ್ಟುನಿಟ್ಟಾಗಿ ತೆಗೆದುಕೊಳ್ಳುತ್ತಿದ್ದಾರ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಿ ಎಂದರು.

ಜಿಲ್ಲೆಯಲ್ಲಿ 45ವರ್ಷ ಮೇಲ್ಪಟ್ಟವರಿಗೆ 2ನೇ ಹಂತದ ಲಸಿಕೆ ನೀಡಬೇಕಾಗಿರುವುದರಿಂದ ಮೊದಲ ಹಂತದವರಿಗೆ ನೀಡಲು ತರಿಸಿರುವ ಎಲ್ಲಾ ಲಸಿಕೆಗಳನ್ನು ಸಂಪೂರ್ಣವಾಗಿ 2ನೇ ಲಸಿಕೆಗಾಗಿ ಬಳಸಿಕೊಳ್ಳಿ ಎಂದು ಹೇಳಿದರು.

ಇಂದು 135 ಆಕ್ಸಿಜನ್ ಕಾನ್ಸಂಟ್ರೇಟರ್ ಗಳು ಬಂದಿದ್ದು, ಶೀಘ್ರವಾಗಿ ಎಲ್ಲಾ ತಾಲ್ಲೂಕುಗಳಿಗೆ ಕಳುಹಿಸಲಾಗುತ್ತದೆ. ಇದನ್ನು ಜಾಗೃತವಾಗಿ ಬಳಸಿ ಎಂದರು.

ಕೋವಿಡ್ ಮಿತ್ರವನ್ನು ಸಂಪರ್ಕಿಸಿ ಪಂಚಸೂತ್ರದ ಅಂಶಗಳನ್ನು ಅಳವಡಿಸಿಕೊಂಡು ಗುಣವಾದವರನ್ನು ಮಾತನಾಡಿಸಿ ಅವರನ್ನು ರೆಡಿಯೋಗಳಲ್ಲಿ ಹಾಗೂ ಸ್ಥಳೀಯ ಮಾಧ್ಯಮಗಳಲ್ಲಿ ಮಾತನಾಡಿಸಿದರೆ ಕೋವಿಡ್ ಮಿತ್ರದ ಬಗ್ಗೆ ಜನರಲ್ಲಿ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್.ಮಂಜುನಾಥ ಸ್ವಾಮಿ ತಿಳಿಸಿದರು.

ಸಭೆಯಲ್ಲಿ ತಹಶಿಲ್ದಾರ್ ರಕ್ಷಿತ್, ತಾಲ್ಲೂಕು ಪಂಚಾಯತಿಯ ಮುಖ್ಯಕಾರ್ಯನಿರ್ವಾಕ ಅಧಿಕಾರಿ ಎಂ.ಎಸ್.ರಮೇಶ್, ಡಿ.ಎಚ್.ಒ. ಡಾ.ಟಿ.ಅಮರನಾಥ್, ಡಾ. ಶಿವಪ್ರಸಾದ್, ಡಾ. ಚಿದಂಬರ್, ಡಾ. ಎಲ್.ರವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *