ಈ ಬಾರಿ ಬಹುತೇಕ ನಾಡಹಬ್ಬ ದಸರಾ ಸರಳ!
1 min readಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2021 ಉನ್ನತ ಮಟ್ಟದ ಸಮಿತಿ ಸಭೆ ನಡೆದಿದೆ. ಸಭೆಯಲ್ಲಿ ಸಹಕಾರ ಸಚಿವ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸಂಸದರು, ಶಾಸಕರು ಮತ್ತಿತರ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ವೇಳೆ ಕೋವಿಡ್ ಆತಂಕ ವ್ಯಕ್ತಪಡಿಸಿದ ತಜ್ಞರು ಸರಳವಾಗಿ ದಸರಾ ಆಚರಣೆ ಮಾಡಿದರೆ ಸಮಸ್ಯೆ ಇಲ್ಲ ಎಂದು ಸಲಹೆ ನೀಡಿದ್ದಾರೆ. ತಜ್ಞರ ವರದಿಯನ್ನ ಪ್ರಸ್ತಾಪ ಮಾಡಿದ ಸಿಎಂಗೆ ಮೈಸೂರಿನ ಸ್ಥಳೀಯ ಶಾಸಕರು ಹಾಗೂ ಜನಪ್ರತಿನಿಧಿಗಳು ದಸರಾ ಆಚರಣೆ ಬಗ್ಗೆ ಸಾಕಷ್ಟು ಸಲಹೆ ನೀಡಿದ್ದಾರೆ. ಅಲ್ಲದೆ ದಸರಾ ಸರಳವಾಗಿಯೇ ಆಗಲಿ ಎಂದಿದ್ದಾರೆ.