ದಸರಾ ಖಾಸಗಿ ದರ್ಬಾರ್ ಹಿನ್ನಲೆ’ ಈ ದಿನಗಳು ಅರಮನೆಗೆ ಪ್ರವೇಶ ಇಲ್ಲ!

1 min read

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ ಹಿನ್ನಲೆ. ಸೆಪ್ಟೆಂಬರ್ 26 ರಂದು ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್ ನ ಪೂಜಾ ಕಾರ್ಯ ನಡೆಯುವ ಕಾರಣ, ಸೆ.26 ರಂದು ಬೆಳಿಗ್ಗೆ 10 ರಿಂದ 1.30 ಗಂಟೆ ತನಕ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಿಲಾಗಿದೆ. ಅರಮನೆಯಲ್ಲಿ ಅ.4 ರಂದು ರಾಜವಂಶಸ್ಥ ಯದುವೀರ್ ಅವರ ಆಯುಧ ಪೂಜೆಯಿದ್ದು ಅಂದು ಬೆಳಗ್ಗೆ 10 ರಿಂದ 1.30 ಗಂಟೆ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಮಾಡಲಾಗಿದೆ. ಇನ್ನು ಅ.5 ರಂದು ಅರಮನೆಯಲ್ಲಿ ಯದುವೀರ್ ವಿಜಯದಶಮಿಯ ಪೂಜಾ ಕೈಂಕರ್ಯ ನೆರವೇರಲಿದ್ದು, ಇಡೀ ದಿನ ಮೈಸೂರು ಅರಮನೆಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಅಂತಿಮವಾಗಿ ಅ.20 ರಂದು ಸಿಂಹಾಸನ ವಿಸರ್ಜನೆ ನಡೆಯುವ ಕಾರಣ ಅ.20 ರಂದು ಮೈಸೂರು ಅರಮನೆಗೆ ‌ಬೆಳಿಗ್ಗೆ 10 ರಿಂದ 1.30 ಗಂಟೆ ತನಕ ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧ ಮಾಡಲಾಗಿದೆ ಎಂದು
ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕರಾದ ಸುಬ್ರಹ್ಮಣ್ಯ ಅವರು ತಿಳಿಸಿದ್ದಾರೆ.

About Author

Leave a Reply

Your email address will not be published. Required fields are marked *