ಗುರುವಾರದಿಂದ ವೈದ್ಯರ ನಡೆ ಹಳ್ಳಿಯ ಕಡೆ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

1 min read

ಮೈಸೂರು: ರಾಜ್ಯ ಸರ್ಕಾರ ತಿಳಿಸಿರುವ ‘ವೈದ್ಯರ ನಡೆ ಹಳ್ಳಿಯಕಡೆ’ ಕಾರ್ಯಕ್ರಮಕ್ಕೆ ಗುರುವಾರದಿಂದ ಎಲ್ಲಾ ತಾಲ್ಲೂಕುಗಳಲ್ಲಿ ಚಾಲನೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಆಯಾ ಕ್ಷೇತ್ರದ ಶಾಸಕರಿಂದ ಈ ಕಾರ್ಯಕ್ರಮಕ್ಕೆ ಚಾಲನೆ ಕೊಡಿಸಲು ವ್ಯವಸ್ಥೆ ಮಾಡಿಸಬೇಕು ಎಂದು ಮಂಗಳವಾರ ನಡೆದ ವಿಡಿಯೋ ಸಂವಾದದ ಸಭೆಯಲ್ಲಿ ಅವರು ತಿಳಿಸಿದರು.

ವೈದ್ಯರು ಹಾಗೂ ಎ.ಎನ್.ಎಂ / ಅಂಗನವಾಡಿ ಕಾರ್ಯಕರ್ತರ ತಂಡ ಪ್ರತಿಯೊಂದು ಮನೆಗೆ ತೆರಳಿ ಸೋಂಕು ಲಕ್ಷಣ ಇರುವ ವ್ಯಕ್ತಿಗಳನ್ನು ಗುರುತಿಸಿ ಅತಿ ಹೆಚ್ಚು RAT ಟೆಸ್ಟ್ ಗಳನ್ನು ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸೋಂಕಿತರು ಎಲ್ಲಿರುವರೋ ಅಲ್ಲೆ ಅವರನ್ನು ಗುರುತಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದರು.

About Author

Leave a Reply

Your email address will not be published. Required fields are marked *