ಕೈಗಾರಿಕೆಗಳ ಸಾಮಾಜಿಕ ಹೊಣೆಗಾರಿಕೆ ಅನುದಾನದಲ್ಲಿ ಕೋವಿಡ್ ನಿರ್ವಹಣೆಗೆ ಮುಂದಾಗಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಕರೆ
1 min readಮೈಸೂರು: ಕೋವಿಡ್ ನಿರ್ವಹಣೆಗೆ ಬೇಕಾಗುವ ವೈದ್ಯಕೀಯ ಮತ್ತು ತಾಂತ್ರಿಕ ಸಲಕರಣೆ ಒದಗಿಸಲು ಕೈಗಾರಿಕೆಗಳ ಸಿ.ಎಸ್.ಆರ್. ಯೋಜನೆಯಡಿ ನೆರವಾಗುವಂತೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಮನವಿ ಮಾಡಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಜಿಲ್ಲೆಯ ಕೈಗಾರಿಕಾ ಪ್ರತಿನಿಧಿಗಳ ಸಭೆ ನಡೆಸಿ ಮಾತನಾಡಿದರು.
ಕಳೆದ ವರ್ಷ ಸಿ.ಎಸ್.ಆರ್.ನಲ್ಲಿ ಮಾಸ್ಕ್, ಸ್ಯಾನಿಟೈಸರ್‌ಅನ್ನು ಕೊಟ್ಟಿದ್ದಾರೆ. ಈ ವರ್ಷ ಮಾಸ್ಕ್, ಸ್ಯಾನಿಟೈಸರ್‌ಗೆ ಬೇಡಿಕೆ ಇಲ್ಲ. ಈ ವರ್ಷ ವೈದ್ಯಕೀಯ ಮೂಲಸೌಕರ್ಯದ ಅಗತ್ಯವಿದೆ. ಆ ನಿಟ್ಟಿನಲ್ಲಿ ಕೈಗಾರಿಕೆಗಳು ಜವಾಬ್ದಾರಿ ತೆಗೆದುಕೊಳ್ಳುವಂತೆ ಹೇಳಿದರು.
ಮೈಸೂರಿನ ಮೂರು ಕಡೆ ಆರಂಭಿಸಲಾಗುತ್ತಿರುವ “ಕೋವಿಡ್ ಮಿತ್ರ” ಟ್ರಯೇಜ್ (ಚಿಕಿತ್ಸಾ ಸರದಿ ನಿರ್ಧಾರ) ಮತ್ತು ಸಲಹಾ ಕೇಂದ್ರಗಳ ನಿರ್ವಹಣೆಯ ಜವಾಬ್ದಾರಿಯನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಶಿಲ್ಪನಾಗ್, ಅಪರ ಜಿಲ್ಲಾಧಿಕಾರಿ ಡಾ. ಬಿ.ಎಸ್.ಮಂಜುನಾಥಸ್ವಾಮಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ಜಿಲ್ಲಾ ಸರ್ಜನ್ ಡಾ. ರಾಜೇಶ್ವರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಟಿ.ಅಮರನಾಥ್, ಮತ್ತಿತರರು ಉಪಸ್ಥಿತರಿದ್ದರು.