ಬೆಳಗ್ಗೆ ಆದೇಶ ಸಂಜೆ ವಾಪಸ್!
1 min readಮೈಸೂರು ಜಿಲ್ಲೆಯಲ್ಲಿ ಶಿಕ್ಷಕರು ಜೀನ್ಸ್ ಪ್ಯಾಂಟ್ ಹಾಗೂ ಟಿ ಶರ್ಟ್ ಹಾಕುವಂತಿಲ್ಲ ಎಂದು ಅಧಿಕೃತವಾಗಿ ಹೊರಡಿಸಲಾಗಿದ್ದ ಆದೇಶವನ್ನ ವಾಪಾಸ್ ಪಡೆಯಲಾಗಿದೆ. ಕರ್ತವ್ಯದಲ್ಲಿ ಇರುವಾಗ ಸಿಬ್ಬಂದಿಗಳ್ಯಾರು ಕೂಡ ಟೀ ಶರ್ಟ್ ಅಥವಾ ಜೀನ್ಸ್ ಪ್ಯಾಂಟ್ ಧರಿಸದಂತೆ ಡಿಡಿಪಿಯು ಶ್ರೀನಿವಾಸ್ ಮೂರ್ತಿ ಆದೇಶ ಹೊರಡಿಸಿದ್ದರು. ಜಿಲ್ಲಾ ಉಪನಿರ್ದೇಶಕರ ಕಚೇರಿ ಮತ್ತು ಕಾಲೇಜುಗಳಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗೆ ಈ ಆದೇಶ ಅನ್ವಯಿಸಿ ಕರ್ತವ್ಯದ ವೇಳೆ ಟಿ – ಷರ್ಟ್ ಹಾಗು ಜೀನ್ಸ್ ಪ್ಯಾಂಟ್ ಗಳನ್ನು ಧರಿಸುವುದನ್ನು ನಿರ್ಬಂಧಿಸಲಾಗಿದೆ ಎನ್ನಲಾಗಿತ್ತು. ಆದರೆ ಈ ಆದೇಶದಿಂದ ಸ್ವತಹ ಜಿಲ್ಲಾಧಿಕಾರಿಗಳಿಗೆ ಶಾಕ್ ಆಗಿದ್ದು ಕೂಡಲೇ ಆದೇಶ ಹಿಂಪಡೆಯುವಂತೆ ಸೂಚಿಸಿದ್ದಾರೆ. ಅಲ್ಲದೆ ಯಾರು ಈ ಆದೇಶ ಹೊರಡಿಸಲು ಹೇಳಿದ್ದು ಎಂದು ಆಕ್ರೋಶ ಹೊರಹಾಕಿದ್ದಾರೆ. ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾದ ಈ ಆದೇಶ ಸದ್ಯಕ್ಕೆ ಹಿಂಪಡೆಯಲಾಗಿದೆ.