ಮೈಸೂರಿಂದ ಚಾಮರಾಜನಗರಕ್ಕೆ ಆಕ್ಸಿಜನ್ ಸಿಲಿಂಡರ್ ಕಳುಹಿಸಲಾಗಿದೆ: ವಿಳಂಬ ಮಾಡಿಲ್ಲ;- ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ
1 min readಮೈಸೂರು: ಚಾಮರಾಜನಗರ ಕೋವಿಡ್ ಆಸ್ಪತ್ರೆಯಲ್ಲಿ 20ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಇದಕ್ಕೆ ಆಮ್ಲಜನಕ ಕೊರತೆಯೇ ಕಾರಣ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಚಾಮರಾಜನಗರ ಜಿಲ್ಲಾಡಳಿತ ಈವರೆಗೆ ಯಾವುದೇ ಅಧಿಕೃತ ಮಾಹಿತಿಯನ್ನು ನೀಡಿಲ್ಲ. ಇದೀಗ ಆಕ್ಸಿಜನ್ ಪೂರೈಕೆಯಲ್ಲಿ ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ಆದರೆ ಈ ಬಗ್ಗೆ ಮೈಸೂರು ಜಿಲ್ಲಾಡಳಿತ ಸ್ಪಷ್ಟನೆ ನೀಡಿದ್ದು ಚಾಮರಾಜನಗರದವರ ಬೇಡಿಕೆಯಂತೆ ಮಾನವೀಯ ದೃಷ್ಟಿಯಿಂದ ಆಕ್ಸಿಜನ್ ಸಿಲಿಂಡರ್ ಕಳುಹಿಸಲಾಗಿದೆ. ಈ ವಿಚಾರದಲ್ಲಿ ಮೈಸೂರು ಜಿಲ್ಲಾಡಳಿತ ವಿಳಂಬ ಮಾಡಿಲ್ಲ ಎಂದಿದೆ.
ನಿನ್ನೆ ರಾತ್ರಿ 12.30 ರವರೆಗೂ ಮೈಸೂರಿನಿಂದ ಚಾಮರಾಜನಗರಕ್ಕೆ ಒಟ್ಟು 250 ಆಕ್ಸಿಜನ್ ಸಿಲಿಂಡರ್ ಕಳುಹಿಸಲಾಗಿದೆ. ಆಕ್ಸಿಜನ್ ಲಿಕ್ವಿಡ್ ಬಳ್ಳಾರಿ ಯಿಂದ ಚಾಮರಾಜನಗರಕ್ಕೆ ಬರಬೇಕಿತ್ತು. ಅದು ಸರಿಯಾದ ಸಮಯದಲ್ಲಿ ಬಂದಿದ್ದೇಯಾ ಇಲ್ಲವೋ ಗೊತ್ತಿಲ್ಲ. ನಾವು ಅಧಿಕೃತ ವಾಗಿ 250 ಆಕ್ಸಿಜನ್ ಸಿಲಿಂಡರ್ ನಿನ್ನೆ ಮಧ್ಯರಾತ್ರಿಯ ವೇಳೆಗೆ ಕಳಿಸಿರೋದು ದಾಖಲೆಯಲ್ಲಿದೆ. ಮೈಸೂರಿನ ಸೌತ್ರನ್ ಗ್ಯಾಸ್ ನಿಂದ 210. ಹಾಗೂ ಮೈಸೂರು ಜಿಲ್ಲಾ ಆಸ್ಪತ್ರೆಯಿಂದ 40 ಆಕ್ಸಿಜನ್ ಸಿಲಿಂಡರ್ ಚಾಮರಾಜ ನಗರಕ್ಕೆ ನಿನ್ನೆ ಮಧ್ಯರಾತ್ರಿಯೆ ರವಾನೆ ಮಾಡಲಾಗಿದೆ ಎಂದು ವಾರ್ತಾ ಇಲಾಖೆಯ ವ್ಯಾಟ್ಸಪ್ ಗ್ರೂಪ್‌ನಲ್ಲಿ ಮೈಸೂರು ಜಿಲ್ಲಾಡಳಿತ ಮಾಹಿತಿ ನೀಡಿದೆ.