ಮೈಸೂರಿನಲ್ಲಿ ಸಂಪೂರ್ಣ ಲಾಕ್‌ಡೌನ್: ಡಿಸಿಯವರ ವಿಶೇಷ ಅಧಿಕಾರ ಬಳಸಿ ಈ ಆದೇಶ

1 min read

ಮೈಸೂರು: ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಮೈಸೂರಿನಲ್ಲೂ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗಿದೆ.

ಎರಡು ದಿನ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದೆ ಸೋಮವಾರ ಮತ್ತು ಗುರುವಾರ ಖರೀದಿಗೆ ಅವಕಾಶವಿರುತ್ತದೆ ಉಳಿದ ದಿನಗಳಲ್ಲಿ ಸಂಪೂರ್ಣ ಲಾಕ್‌ಡೌನ್ ಮೇ 29 ರಿಂದ ಜೂನ್ 07ರ ಬೆಳಿಗ್ಗೆ 6.00 ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ.

ಸೋಮವಾರ ಮತ್ತು ಗುರುವಾರ ಸರ್ಕಾರ ಅನುಮತಿ ನೀಡಿರುವುದಕ್ಕೆ ಮಾತ್ರ ಅವಕಾಶವಿದೆ. ಅದು ಸಹಾ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ. ಇನ್ನು ಬ್ಯಾಂಕ್‌ ಹಾಗೂ ಭಾರತೀಯ ವಿಮಾ ಯೋಜನೆಯ ವ್ಯವಹಾರಗಳಿಗೂ ಸಮಯ ನಿಗದಿ ಮಾಡಲಾಗಿದೆ. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾತ್ರ ಅವುಗಳಿಗೆ ಅವಕಾಶ ನೀಡಲಾಗಿದೆ.

ಹಾಲಿನ ಬೂತ್‌ಗಳು, ವೈದ್ಯಕೀಯ ಸೇವೆಗಳು, ಹಾಪ್ ಕಾಮ್ಸ್ ಅಡಿಯಲ್ಲಿ ಬರುವ ತರಕಾರಿ ಮತ್ತು ಹಣ್ಣಿನ ಅಂಗಡಿಗಳು, ನ್ಯಾಯ ಬೆಲೆ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ರೀತಿಯ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಬಂಧ ವಿಧಿಸಲಾಗಿದೆ. ನಿಷೇದಾಜ್ಞೆ ಅವಧಿಯಲ್ಲಿ ಸರಕು ಸಗಟು ವಾಹನಗಳಿಗೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ‌.

ಬೇರೆ ಯಾವುದೇ ವಾಹನ ಸಂಚಾರ ಜನರ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ವಿಪತ್ತು ನಿರ್ವಹಣಾ ಕಾಯ್ದೆ-2005 ರ ಉಪಬಂಧಗಳು ಭಾರತೀಯ ದಂಡ ಸಂಹಿತೆಯ ಅನುಚ್ಛೇದ 188ರ ಅಡಿಯಲ್ಲಿ ಕ್ರಮಕೈಗೊಳ್ಳಲಾಗುವುದು.

About Author

Leave a Reply

Your email address will not be published. Required fields are marked *