ಮೈಸೂರು : ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಹಾಗೂ 7ನೇ ಆರೋಪಿ ಬಂಧನ!
1 min read
ಮೈಸೂರಿನ ನಿರ್ಜನ ಪ್ರದೇಶದಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಪ್ರಮುಖ ಆರೋಪಿಯನ್ನ ಮೈಸೂರು ವಿಶೇಷ ಪೊಲೀಸರ ತಂಡ ಬಂಧಿಸಿದೆ. ತಮಿಳುನಾಡಿನ ಈರೋಡ್ ಜಿಲ್ಲೆಯಲ್ಲಿ ಆರೋಪಿಯನ್ನ ಬಂಧಿಸಿದ್ದು ಮೈಸೂರಿಗೆ ಕರೆತರುತ್ತಿದ್ದಾರೆ. ಮೂರ್ನಾಲ್ಕು ದಿನದಿಂದ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳುತ್ತಿದ್ದ ಇವನನ್ನ ಕೊನೆಗು ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಅಲ್ಲದೆ ಈತನೇ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ ಎನ್ನಲಾಗಿದೆ.