ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡ ಪಾಲಿಕೆ ಸದಸ್ಯತ್ವ ರದ್ದು
1 min readಮೈಸೂರು: ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡ ಸದಸ್ಯತ್ವ ರದ್ದುಗೊಂಡಿದೆ. ಮಹಾನಗರ ಪಾಲಿಕೆ ಸದಸ್ಯತ್ವ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಪಾಲಿಕೆಯ 36 ನೇ ವಾರ್ಡ್ ಸದಸ್ಯೆಯಾಗಿರುವ ರುಕ್ಮಿಣಿ ಮಾದೇಗೌಡ ಚುನಾವಣೆ ವೇಳೆ ಸೂಕ್ತ ಆದಾಯ ಪ್ರಮಾಣ ಪತ್ರ ಸಲ್ಲಿಸದ ಹಿನ್ನೆಲೆ ಹೈಕೋರ್ಟ್ ಪಾಲಿಕೆ ಸದಸ್ಯತ್ವ ರದ್ದುಗೊಳಿಸಿದೆ.
ಇನ್ನು ಪಾಲಿಕೆ ಸದಸ್ಯತ್ವ ರದ್ದಾಗಿರುವುದರಿಂದ ಮೇಯರ್ ಸ್ಥಾನಕ್ಕೂ ಕಂಟಕ ಎದುರಾಗಿದೆ. ಸುಪ್ರೀಂ ಕೋರ್ಟ್ ಗೆ ಅರ್ಜಿ ಹಾಕುವವರೆಗೂ ಮೇಯರ್ ಗೆ ಅಧಿಕಾರ ಇರಲ್ಲ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ರುಕ್ಮಿಣಿ ನಿರ್ಧಾರ ಮಾಡಿದ್ದಾರೆ.