ಹೊಸ ವರ್ಷದ ನೈಟ್ ಪಾರ್ಟಿಗೆ ಮೈಸೂರಲ್ಲಿ ಬ್ರೇಕ್- ಕಠಿಣ ಕ್ರಮ ಕೈಗೊಂಡ ಪೊಲೀಸರು!
1 min readಹೊಸ ವರ್ಷಾಚರಣೆಗೆ ಸರ್ಕಾರ ನಿರ್ಬಂಧ ಹೇರಿರುವ ಹಿನ್ನೆಲೆಯಲ್ಲಿ ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ಸುದ್ದಿಗೋಷ್ಠಿ ನಡೆಸಿದ್ದಾರೆ. ನಾಳೆ ರಾತ್ರಿಯಿಂದ ನೈಟ್ ಕರ್ಫ್ಯೂ ಜಾರಿಗೆ ಬರಲಿದ್ದು, ಓಮಿಕ್ರಾನ್ ವೈರಸ್ ಸೋಂಕು ತಡೆಗಟ್ಟುವ ಸಲುವಾಗಿ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ ಎಂದರು.
–ಇದೇ ರೀತಿ ನೂತನ ವರ್ಷಾಚರಣೆಗೆ ಸರ್ಕಾರದ ನಿರ್ದೇಶನದಂತೆ ನಿರ್ಬಂಧಗಳನ್ನು ಹೇರಲಾಗಿದೆ. ಡಿಸೆಂಬರ್ 30, 31 ಹಾಗೂ ಜನವರಿ 1, 2 ರಂದು ಅನ್ವಯವಾಗುವಂತೆ ಹೊಸ ವರ್ಷಾಚರಣೆಗೆ ನಿರ್ಬಂಧ ಹೇರಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಹೇಳಿದ್ದಾರೆ.