ಮೈಸೂರಿನಲ್ಲಿಂದು 102 ಕೊರೊನಾ ಪಾಸಿಟಿವ್ ಕೇಸ್ ಪತ್ತೆ: ಓರ್ವ ಸಾವು
1 min read![](https://nannurumysuru.com/wp-content/uploads/2021/05/Mysuru-5.jpg)
ಮೈಸೂರು: ಮೈಸೂರಿನಲ್ಲಿಂದು 102 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,75,541ಕ್ಕೇರಿಕೆಯಾಗಿದೆ.
ಇನ್ನು ಇಂದು 83 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,72,192 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 996ಕ್ಕೆ ಏರಿಕೆಯಾಗಿದೆ.
![](https://nannurumysuru.com/wp-content/uploads/2023/09/Nayana-Kumars.jpg)
ಅಲ್ಲದೆ ಮೈಸೂರಿನಲ್ಲಿಂದು ಓರ್ವ ಕೊರೊನಾ ಸೋಂಕಿತ ಸಾವನ್ನಪ್ಪಿದ್ದು ಇದುವರೆಗೆ 2,353 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.