ಮೈಸೂರಿನಲ್ಲಿಂದು 1,171 ಕೊರೊನಾ ಪಾಸಿಟಿವ್ ಕೇಸ್ ಪತ್ತೆ: 13 ಮಂದಿ ಸಾವು
1 min readಮೈಸೂರು: ಮೈಸೂರಿನಲ್ಲಿಂದು 1,171 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,42,815 ಕ್ಕೇರಿಕೆಯಾಗಿದೆ.
ಇನ್ನು ಇಂದು 1,893 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,26,106 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 15,085ಕ್ಕೆ ಇಳಿಕೆಯಾಗಿದೆ.
ಅಲ್ಲದೆ ಮೈಸೂರಿನಲ್ಲಿಂದು 13 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 1,624 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.