ಮೈಸೂರಲ್ಲಿ ಕಡಿಮೆ ಆಯ್ತು ಪಾಸಿಟಿವ್ ಕೇಸ್’ ಹೆಚ್ಚಾಯ್ತು ಸಾವಿನ ಸಂಖ್ಯೆ!
1 min readಮೈಸೂರು: ಮೈಸೂರಿನಲ್ಲಿಂದು 1260 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,05487 ಕ್ಕೇರಿಕೆಯಾಗಿದೆ.
ಇನ್ನು ಇಂದು 1249 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 88091 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 16,026 ಕ್ಕೆ ಏರಿಕೆಯಾಗಿದೆ.
ಅಲ್ಲದೆ ಮೈಸೂರಿನಲ್ಲಿಂದು 15 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 1,370 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.