ಮೈಸೂರಿನಲ್ಲಿಂದು 1,773 ಕೊರೊನಾ ಪಾಸಿಟಿವ್ ಕೇಸ್ ಪತ್ತೆ
1 min readಮೈಸೂರು: ಮೈಸೂರಿನಲ್ಲಿಂದು 1,773 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,04,227 ಕ್ಕೇರಿಕೆಯಾಗಿದೆ.
ಇನ್ನು ಇಂದು 882 ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ 86,842 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 16,030 ಕ್ಕೆ ಏರಿಕೆಯಾಗಿದೆ.
ಇಂದು 09 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು, ಮೈಸೂರಿನಲ್ಲಿ ಇದುವರೆಗೆ 1,355 ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ.