ಮೈಸೂರಿನಲ್ಲಿಂದು 210 ಹೊಸ ಕೋವಿಡ್ ಕೇಸ್- 4 ಮಂದಿ ಕರೋನಾಗೆ ಸಾವು!
1 min readಮೈಸೂರು: ಮೈಸೂರಿನಲ್ಲಿಂದು 210 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,71,150 ಕ್ಕೇರಿಕೆಯಾಗಿದೆ.
ಇನ್ನು ಇಂದು 237 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,66,730 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2143ಕ್ಕೆ ಇಳಿಕೆಯಾಗಿದೆ.
ಅಲ್ಲದೆ ಮೈಸೂರಿನಲ್ಲಿಂದು 04 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 2,277 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.