ಮೈಸೂರಿನಲ್ಲಿಂದು 2,489 ಕೊರೊನಾ ಪಾಸಿಟಿವ್ ಕೇಸ್ ಪತ್ತೆ: 15 ಮಂದಿ ಸಾವು
1 min read![](https://nannurumysuru.com/wp-content/uploads/2021/04/Mysuru-2.jpg)
ಮೈಸೂರು: ಮೈಸೂರಿನಲ್ಲಿಂದು 2,489 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,10,316ಕ್ಕೇರಿಕೆಯಾಗಿದೆ.
ಇನ್ನು ಇಂದು 2,338 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 94,053 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 14,866ಕ್ಕೆ ಏರಿಕೆಯಾಗಿದೆ.
![](https://nannurumysuru.com/wp-content/uploads/2023/09/Nayana-Kumars.jpg)
ಅಲ್ಲದೆ ಮೈಸೂರಿನಲ್ಲಿಂದು 15 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 1,397 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.
![](https://nannurumysuru.com/wp-content/uploads/2021/05/E1bs1LoUUAMqh4m-833x1024.jpg)