ಮೈಸೂರಿನಲ್ಲಿ ಮುಂದುವರೆದ ಕೊರೋನಾ ಸೋಂಕಿತರು ಮರಣ ಮೃದಂಗ
1 min readಮೈಸೂರು: ಮೈಸೂರಿನಲ್ಲಿ ಕೊರೋನಾ ಸೋಂಕಿತರು ಮರಣ ಮೃದಂಗ ಮುಂದುವರೆದಿದ್ದು, ಇಂದು 14 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 25 ದಿನದಲ್ಲಿ 164 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಇಲ್ಲಿಯ ವರೆಗು ಒಟ್ಟು 1234 ಮಂದಿ ಕೊರೋನಾಗೆ ಮೃತಪಟ್ಟಿದ್ದಾರೆ.
ಇಂದು ಬರೋಬ್ಬರಿ 2685 ಹೊಸ ಪಾಸಿಟಿವ್ ಕೇಸ್ ದಾಖಲಾಗಿದೆ. ಇನ್ನು ಇಂದು 1605 ಮಂದಿ ಗುಣಮುಖರಾಗಿದ್ದು, ಒಟ್ಟು ಈ ವರೆಗು 68950 ಮಂದಿ ಗುಣಮುಖರಾಗಿದ್ದಾರೆ. ಸದ್ಯ ಒಟ್ಟು ಸೋಂಕಿತರು 84739 ಮಂದಿಗೆ ಸೋಂಕು ತಗುಲಿದ್ದು, ಇದೀಗಾ ಸಕ್ರಿಯ ಪ್ರಕರಣಗಳ ಸಂಖ್ಯೆ 14555ಕ್ಕೆ ಏರಿದೆ.