ಮೈಸೂರನಲ್ಲಿ ಇಂದು 97 ಹೊಸ ಪಾಸಿಟಿವ್ ಕೇಸ್- ಇಬ್ಬರು ಸಾವು!
1 min readಮೈಸೂರು: ಮೈಸೂರಿನಲ್ಲಿಂದು 97 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ 1,72,117 ಕ್ಕೇರಿಕೆಯಾಗಿದೆ.
ಇನ್ನು ಇಂದು 133 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇದುವರೆಗೂ 1,68,143 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,681ಕ್ಕೆ ಇಳಿಕೆಯಾಗಿದೆ.
ಅಲ್ಲದೆ ಮೈಸೂರಿನಲ್ಲಿಂದು ಇಬ್ಬರು ಕೊರೊನಾ ಸೋಂಕಿತರು ಸಾವನ್ನಪ್ಪಿದ್ದು ಇದುವರೆಗೆ 2,293 ಕೊರೊನಾ ಸೋಂಕಿತರು ಮೃತರಾಗಿದ್ದಾರೆ.