ವಿಶ್ವ ವಿಖ್ಯಾತ ಮೈಸೂರು ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ಗ್ರೀನ್ ಸಿಗ್ನಲ್!
1 min readವಿಶ್ವವಿಖ್ಯಾತ ಮೈಸೂರು ಅರಮನೆಗೆ ನಾಳೆಯಿಂದ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಅರಮನೆ ವೀಕ್ಷಣೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಅರಮನೆಯ ವೀಕ್ಷಣೆಗೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5.30 ರವರೆಗೆ ಅವಕಾಶ
ಅರಮನೆಯ ವೆಬ್ಸೈಟ್ www.mysorepalace.gov.in ನಲ್ಲಿ ಆನ್ಲೈನ್ ಮೂಲಕ ಟಿಕೆಟ್ ಖರೀದಿಗೆ ಅವಕಾಶವಿದ್ದು ಅರಮನೆಯ ವರಾಹ ದ್ವಾರಗಳಲ್ಲಿರುವ ಟಿಕೆಟ್ ಕೌಂಟರ್ನಲ್ಲಿಯೂ ಸಹ ಟಿಕೆಟ್ ಸೌಲಭ್ಯ ಕಲ್ಪಿಸಲಾಗಿದೆ. ಪ್ರವಾಸಿಗರಿಗೆ ಅರಮನೆಯ ಪ್ರವೇಶ ದ್ವಾರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯಿದ್ದು, ಅರಮನೆಯ ಪ್ರವೇಶ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.
ಟಿಕೆಟ್ ಕೌಂಟರ್ನಲ್ಲಿ ಪ್ರವಾಸಿಗರ ನಡುವೆ ಅಂತರ ಕಾಯ್ದುಕೊಳ್ಳಲು ಚೌಕಾಕಾರದ ಗುರುತು, ಪ್ರವಾಸಿಗರು ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು. ಜೊತೆಗೆ ಮಾಸ್ಕ್ ತಪ್ಪದೇ ಧರಿಸಬೇಕೆಂದು ಸೂಚಿಸಲಾಗಿದೆ. ಅರಮನೆಗೆ ಆಗಮಿಸುವ ಪ್ರವಾಸಿಗರ ಮೇಲೆ ಸಿಸಿಟಿವಿ ಕಾವಲಿದ್ದು, ಅರಮನೆಯ ಆವರಣದಲ್ಲಿ ಸೂಚನಾ ಫಲಕಗಳ ಮೂಲಕ ಜಾಗೃತಿ ಮೂಡಿಲಾಗಿದೆ. ಏಪ್ರಿಲ್ 24 ರಿಂದ ವಿಶ್ವ ವಿಖ್ಯಾತ ಮೈಸೂರು ಅರಮನೆಯ ಪ್ರವೇಶವನ್ನು ಪ್ರವಾಸಿಗರಿಗೆ ನಿರ್ಭಂಧಿಸಲಾಗಿತ್ತು ಎಂದು ಸದ್ಯ ಅರಮನೆಗೆ ಅವಕಾಶ ಕಲ್ಪಿಸಿದ್ದು, ಪ್ರವಾಸಿಗರು ಕರೋನಾ ನಿಯಮ ಪಾಲನೆ ಮಾಡುವಂತೆ ಮೈಸೂರು ಅರಮನೆ ಮಂಡಳಿ ಉಪ ನಿರ್ದೇಶಕ ಟಿ ಎಸ್ ಸುಬ್ರಹ್ಮಣ್ಯ ಮನವಿ ಮಾಡಿದ್ದಾರೆ.