ಮೈಸೂರು ವಿವಿ ಆದೇಶಕ್ಕೆ ವಿರೋಧ – ವಿರೋಧದ ಬೆನ್ನಲ್ಲೆ ಆದೇಶ ಹಿಂಪಡೆದು ಮಾರ್ಪಾಡು ಮಾಡಿದ ಮೈಸೂರು ವಿವಿ
1 min read
ಮೈಸೂರಿನಲ್ಲಿ ಕಾಮುಕರ ಅಟ್ಟಹಾಸ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಕ್ಕರಹಳ್ಳಿ ಕೆರೆ ಮತ್ತು ಮಾನಸಗಂಗೋತ್ರಿ ಆವರಣದಲ್ಲಿ ಕಟ್ಟುನಿಟ್ಟಿನ ಆದೇಶವನ್ನ ಮೈಸೂರು ವಿವಿ ವಾಪಸ್ ಪಡೆದಿದೆ. ಕುಕ್ಕರಳ್ಳಿ ಕೆರೆ ಆವರಣದಲ್ಲಿ ಸಂಜೆ 6.30ರ ನಂತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿತ್ತು. ಸುರಕ್ಷಣಾ ದೃಷ್ಟಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧ ಮಾಡಿ, ಮೈಸೂರು ವಿವಿ ಭದ್ರತಾ ಸಿಬ್ಬಂದಿಯಿಂದಲೇ ಸಂಜೆ 6 ರಿಂದ 9ರವರೆಗೆ ಗಸ್ತು ತಿರುಗಲು ವ್ಯವಸ್ಥೆ ಮಾಡಲಾಗಿತ್ತು.

ಅಲ್ಲದೆ ಮಾನಸ ಗಂಗೋತ್ರಿಯ ಆವರಣದಲ್ಲು ಸಹ ಸಂಜೆ 6.30ರ ನಂತರ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡುವುದನ್ನು ಕೂರುವುದನ್ನು ಸಹ ನಿಷೇಧಿಸಲಾಗಿತ್ತು. ಆದರೆ ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದ ಕಾರಣ ಈ ಆದೇಶವನ್ನ ಹಿಂಪಡೆಯಲಾಗಿದೆ. ಜೊತೆಯಲ್ಲಿ ಸಂಜೆ ವೇಳೆ ವಿದ್ಯಾರ್ಥಿನಿಯರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಆದರೆ ಈ ಆದೇಶ ಪೊಲೀಸ್ ಇಲಾಖೆಯ ಮೌಖಿಕ ನಿರ್ದೇಶನದ ಮೇರೆಗೆ ಮೈಸೂರು ವಿವಿ ಈ ಆದೇಶ ಹಾಗೂ ಸುತ್ತೋಲೆ ಹೊರಡಿಸಿತ್ತು ಎನ್ನಲಾಗಿದೆ.
