ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವ: ಭಕ್ತರಿಗೆ ದೇಗುಲ ಪ್ರವೇಶ ನಿಷೇಧ
1 min readಮೈಸೂರು: ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವ ಜರುಗಲಿದ್ದು ಕೋವಿಡ್ ಹಿನ್ನಲೆ ಭಕ್ತರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಏರಲಾಗಿದೆ.
ಈ ಬಗ್ಗೆ ಮೈಸೂರು ಡಿಸಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಗಿರಿಜಾ ಕಲ್ಯಾಣ ಆಚರಣೆ ಧಾರ್ಮಿಕ ಕಾರ್ಯಕ್ರಮಕ್ಕೆ ಮಾತ್ರ ಸೀಮಿತವಾಗಿರಲಿದೆ. ಪ್ರಧಾನ ಅರ್ಚಕರು ದೇಗುಲದ ಸಿಬ್ಬಂದಿಗೆ ಮಾತ್ರ ಭಾಗಿಯಾಗಲು ಅವಕಾಶ ನೀಡಲಾಗಿದೆ. ದೇಗುಲದ ಆವರಣದೊಳಗೆ ಗಿರಿಜಾ ಕಲ್ಯಾಣ ಆಚರಿಸಲು ಸೂಚಿಸಲಾಗಿದೆ. ಜೂನ್ 26ರಿಂದ ಜುಲೈ 3ರ ವರೆಗೆ ಗಿರಿಜಾ ಕಲ್ಯಾಣ ಮಹೋತ್ಸವ. ಸಾಂಕ್ರಾಮಿಕ ರೋಗ ತಡೆಗಟ್ಟುವ ನಿಟ್ಟಿನಲ್ಲಿ ವಿಶೇಷ ಅಧಿಕಾರ ಬಳಸಿ ಡಿಸಿ ಗೌತಮ್ ಆದೇಶ ಹೊರಡಿಸಿದ್ದಾರೆ.