ಯುವಕರಿಗೆ ಮಾರ್ಗದರ್ಶನಕ್ಕಾಗಿ ನೂತನ ಯುವನೀತಿ ಜಾರಿಗೆ: ಸಿಎಂ ಬಸವರಾಜ ಬೊಮ್ಮಾಯಿ

1 min read

ಬೆಂಗಳೂರು,ಜ. 12-ಯುವಕರಿಗೆ ಮಾರ್ಗದರ್ಶನ ನೀಡುವಂತಹ ಹೊಸ ಯುವ ನೀತಿಯನ್ನು ಜಾರಿಗೆ ತೆರಲು ರಾಜ್ಯ ಸರ್ಕಾರ ಉದ್ದೇಶಿಸಿದೆ.
ಇಂದು ಸ್ವಾಮಿ ವಿವೇಕಾನಂದರ 159 ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ವರ್ಚುಯಲ್ ಆಗಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ವಿಚಾರವನ್ನು ತಿಳಿಸಿದ್ದಾರೆ.


ಯುವಕರಿಗಾಗಿ ತತ್ವಾಧಾರಿತವಾದಂತಹ ವೈಚಾರಿಕೆ ನೆಲೆಯಲ್ಲಿ ಹೆಚ್ಚಿನ ಬೆಂಬಲ, ಪ್ರೋತ್ಸಾಹ ನೀಡಲು ಸರ್ಕಾರ ಸಿದ್ಧವಿದೆ. ಈ ದಿಸೆಯಲ್ಲಿ ವಿಶೇಷ ಯೋಜನೆಯೊಂದನ್ನು ಮುಂದಿನ ಆಯವ್ಯಯದಲ್ಲಿ ತರಲಾಗುವುದು ಎಂದರು.
ನಮ್ಮ ಜೀವನದಲ್ಲಿ ಸ್ವಾಮಿ ವಿವೇಕಾನಂದರು ಸದಾ ಪ್ರಸ್ತುತವಾಗಿರುತ್ತಾರೆ. ಸಾರ್ಥಕತೆಯ ಹಾಗೂ ಸಾಧನೆಯ ಬದುಕನ್ನು ನಡೆಸಿ ಹಾಗೂ ಸಾವಿನ ನಂತರವೂ ಬದುಕುವ ರೀತಿಯನ್ನು ತಿಳಿಸಿದ್ದಾರೆ ಎಂದರು.
ಸ್ವಾಮಿ ವಿವೇಕಾನಂದರ ಬದುಕಿನ ರೀತಿ ನೀತಿಗಳನ್ನು ಯುವಜನತೆಗೆ ಮನದಟ್ಟು ಮಾಡುವ ಕೆಲಸ ಮಾಡಬೇಕಿದೆ. ಸರ್ಕಾರ ಹಾಗೂ ಸಮಾಜ ಈ ನಿಟ್ಟಿನಲ್ಲಿ ಕೆಲಸ ಮಾಡಬೇಕಿದೆ. ರಾಮಕೃಷ್ಣ ಪರಮಹಂಸ, ಶಾರದಾದೇವಿ ಹಾಗೂ ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ಸಮಾಜಕ್ಕೆ ಪ್ರಚುರ ಪಡಿಸುವ ಕೆಲಸವನ್ನು ರಾಮಕೃಷ್ಣ ಮಿಷನ್ ಸಂಸ್ಥೆ ಪರಿಣಾಮಕಾರಿಯಾಗಿ ಮಾಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಸಚಿವರಾದ ಡಾ.ಅಶ್ವತ್ಥ್ ನಾರಾಯಣ್, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ರಾಮಕೃಷ್ಣ ಮಠದ ಸ್ವಾಮೀಜಿಗಳು, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

About Author

Leave a Reply

Your email address will not be published. Required fields are marked *