ಮೈಸೂರಲ್ಲಿ ನೂತನ ಕೋವಿಡ್ ಕೇರ್ ಸೆಂಟರ್ ಆರಂಭಕ್ಕೆ ಸಿದ್ದತೆ
1 min readಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದರ ಬೆನ್ನಲೆ ನೂತನ ಕೋವಿಡ್ ಕೇರ್ ಸೆಂಟರ್ ಆರಂಭಕ್ಕೆ ಸಿದ್ದತೆ ನಡೆಸಲಾಗುತ್ತಿದೆ.
ಮೈಸೂರಿನ ಕೆ.ಆರ್ ಕ್ಷೇತ್ರದಲ್ಲಿರುವ ತುಳಸಿದಾಸ್ ಆಸ್ಪತ್ರೆಯನ್ನು ಕೋವಿಡ್ ಕೇರ್ ಸೆಂಟರ್ ಆಗಿ ಬಳಸಲು ತೀರ್ಮಾನ ಮಾಡಲಾಗಿದೆ. ಇದು ನೂತನವಾಗಿ ನಿರ್ಮಾಣಗೊಂಡಿರುವ ಆಸ್ಪತ್ರೆಯಾಗಿದ್ದು, ಆಸ್ಪತ್ರೆ ಉದ್ಘಾಟನೆಗೊಂಡಿಲ್ಲ. ಉದ್ಘಾಟನೆಗು ಮುನ್ನ ಕೋವಿಡ್ ಕೇರ್ ಸೆಂಟರ್ ಮಾಡಲು ನಿರ್ಧರಿಸಲಾಗಿದೆ.
ಇನ್ನು ಕೋವಿಡ್ ಕೇರ್ ಸೆಂಟರ್ ಆರಂಭಕ್ಕೆ ಜಿಲ್ಲಾಡಳಿತ, ಪಾಲಿಕೆ, ಮುಡಾ ನೇತೃತ್ವದಲ್ಲಿ ಕಾರ್ಯಾರಂಭ ಮಾಡಲಾಗಿದೆ. ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಜವಬ್ದಾರಿಯನ್ನ ಕಾವೇರಿ ಆಸ್ಪತ್ರೆಗೆ ವಹಿಸಲಾಗಿದೆ. ಕಾವೇರಿ ಆಸ್ಪತ್ರೆ ವಾಲೆಂಟಿಯರ್ ಆಗಿ ಮುಂದೆ ಬಂದು ನಿರ್ವಹಣೆ ಮಾಡುವುದಾಗಿ ತಿಳಿಸಿದೆ. ವೈದ್ಯರು, ಸಿಬ್ಬಂದಿಯ ನಿರ್ವಹಣೆ ಕಾವೇರಿ ಆಸ್ಪತ್ರೆ ಹೊತ್ತಿದೆ.
ಇಂದು ಸ್ಥಳ ಪರಿಶೀಲನೆ ನಡೆಸಿದ ಮುಡಾ ಅಧ್ಯಕ್ಷ ರಾಜೀವ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಒಂದು ವಾರದೊಳಗೆ ಈ ಕೋವಿಡ್ ಕೇರ್ ಸೆಂಟರ್ ಕಾರ್ಯಾರಂಭ ಮಾಡಲಿದೆ ಎಂದು ತಿಳಿಸಿದರು.
ಸ್ಥಳ ಪರಿಶೀಲನೆ ವೇಳೆ ಮುಡಾ ಅಧ್ಯಕ್ಷರಿಗೆ ಪಾಲಿಕೆ ಆಯುಕ್ತೆ ಶಿಲ್ಪಾನಾಗ್, ಕಾವೇರಿ ಆಸ್ಪತ್ರೆ ವೈದ್ಯ ಡಾ.ಚಂದ್ರಶೇಖರ್ ಸಾಥ್ ನೀಡಿದರು.