ಸರ್ಕಾರದ ನೈಟ್ ಕರ್ಫ್ಯೂ ಮಾರ್ಗಸೂಚಿಯ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ!
1 min readಸರ್ಕಾರದ ಕೊರೊನಾ ಮಾರ್ಗಸೂಚಿ ಮಾಹಿತಿ 06/08/2021 ರಿಂದ 16/08/2021
ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿ
ಆಗಸ್ಟ್ 16ರವರೆಗೂ ಹೊಸ ಮಾರ್ಗಸೂಚಿ ಅನ್ವಯ
ರಾತ್ರಿ 9 ಗಂಟೆಯಿಂದ ಮುಂಜಾನೆ 5ರವರೆಗೆ ನೈಟ್ ಕರ್ಫ್ಯೂ
ಮಹಾರಾಷ್ಟ್ರ, ಕೇರಳ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ
ಕೇರಳ ಗಡಿ ಜಿಲ್ಲೆಗಳಾದ ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ ಜಿಲ್ಲೆ
ಮಹಾರಾಷ್ಟ್ರ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆ
ಬೆಳಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ
ಬೀದಿಬದಿ ವ್ಯಾಪಾರಿಗಳಿಗೆ ಅವಕಾಶ
ಮದ್ಯ ಪಾರ್ಸೆಲ್‌ಗೆ ಮಾತ್ರ ಅವಕಾಶ
ದಿನದ 24 ಗಂಟೆಯೂ ಹೋಮ್ ಡೆಲಿವರಿಗೆ ಅವಕಾಶ ಇರಲಿದೆ
ಹೋಟೆಲ್, ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರ ಅವಕಾಶ
ರೈಲು, ವಿಮಾನ ಹಾರಾಟಕ್ಕೆ ಯಾವುದೇ ನಿರ್ಬಂಧ ಇಲ್ಲ
ವೀಕೆಂಡ್‌ನಲ್ಲಿ ಸರ್ಕಾರಿ, ಖಾಸಗಿ ಬಸ್ ಸಂಚಾರ ಇರುತ್ತದೆ ರೈಲು, ವಿಮಾನ ಟಿಕೆಟ್ ತೋರಿಸಿ ಪ್ರಯಾಣಕ್ಕೆ ಅವಕಾಶ
ಮದುವೆಯಲ್ಲಿ 100 ಜನರು ಭಾಗಿಯಾಗಲು ಅವಕಾಶ ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನ ಭಾಗಿಯಾಗಲು ಅವಕಾಶ
ಜಾತ್ರೆ, ದೇಗುಲಗಳಲ್ಲಿ ಧಾರ್ಮಿಕ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ದೇಗುಲಗಳಲ್ಲಿ ಪೂಜೆ ಮಾಡುವುದಕ್ಕೆ ಮಾತ್ರ ಅವಕಾಶ
ದೇಗುಲಗಳಲ್ಲಿ ಜಾತ್ರೆ, ಮೆರವಣಿಗೆಗೆ ಅವಕಾಶವಿಲ್ಲ
ಅಗತ್ಯವಸ್ತುಗಳ ಕೈಗಾರಿಕೆಗಳನ್ನು ತೆರೆಯುವುದಕ್ಕೆ ಅನುಮತಿ
ಉಳಿದಂತೆ ಬೇರೆ ಅಂಗಡಿಗಳ ವ್ಯಾಪಾರಕ್ಕೆ ಅವಕಾಶವಿಲ್ಲ