ಮೈಸೂರಲ್ಲಿ ಪ್ರವಾಹ ಭೀತಿ ಇಲ್ಲ- ಸಚಿವ ಎಸ್ ಟಿ ಸೋಮಶೇಖರ್
1 min readಮೈಸೂರು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಇಲ್ಲ ಅಂತ ಮೈಸೂರಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿಕೆ ನೀಡಿದ್ದಾರೆ. ಕಬಿನಿ ಜಲಾಶಯಕ್ಕೆ ಒಳಹರಿವು ಕಡಿಮೆ ಆಗಿದ್ದು, ಈಗ 30 ಸಾವಿರ ಕ್ಯೂಸೆಕ್ ಹೊರಹರಿವು ಇದೆ. ಸುಮಾರು 60- 70 ಸಾವಿರ ಕ್ಯೂಸೆಕ್ ನೀರು ಹರಿದರೆ ಮಾತ್ರ ಪ್ರವಾಹ ಆಗುತ್ತೆ. ಕೆಆರ್‌ಎಸ್ ಡ್ಯಾಂನಿಂದ ಒಂದೂವರೆ ಲಕ್ಷ ಕ್ಯೂಸೆಕ್ ಹೊರಹರಿವು ಇದ್ದರೆ ತೊಂದರೆ ಆಗುತ್ತೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ. ಹೀಗಾಗಿ ಜಿಲ್ಲೆಯಲ್ಲಿ ಪ್ರವಾಹದ ಭೀತಿ ಇಲ್ಲ ಅಂತ ಮೈಸೂರಿನಲ್ಲಿ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಇನ್ನು ಇದೇವೇಳೆ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಲು ಸಚಿವ ಎಸ್.ಟಿ.ಸೋಮಶೇಖರ್ ನಕಾರ ವ್ಯಕ್ತಪಡಿಸಿದ್ದಾರೆ. ಪ್ರಧಾನಿ, ರಾಷ್ಟ್ರೀಯ ಅಧ್ಯಕ್ಷರು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಒಂದು ಸಾಲಿನ ಉತ್ತರ ನೀಡಿ ಪ್ರಶ್ನೆಗಳನ್ನೂ ಕೇಳಿಸಿಕೊಳ್ಳದೆ ಸಚಿವರು ತೆರಳಿದ್ದಾರೆ.