ಜೂನ್ 20/21 ರಂದು ಈ ರಸ್ತೆಯಲ್ಲಿ ವಾಹನ ನಿಲುಗಡೆ ಇಲ್ಲ!
1 min readಪ್ರಧಾನ ಮಂತ್ರಿಗಳ ಮೈಸೂರು ಭೇಟಿ : ರಸ್ತೆ ಬದಿಗಳಲ್ಲಿ ವಾಹನ ನಿಲುಗಡೆ ನಿಷೇದ!
ಮೈಸೂರು :- ಭಾರತದ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು ಅಂತರರಾಷ್ಟ್ರೀಯ ಯೋಗ ದಿನಾಚರಣೆ ಸಂಬಂಧ 2022 ರ ಜೂನ್ 20 ಮತ್ತು 21 ರಂದು ಮೈಸೂರು ನಗರಕ್ಕೆ ಆಗಮಿಸಲಿದ್ದು, ಅವರು ಸಂಚರಿಸುವ ಮಾರ್ಗದಲ್ಲಿ ಗಣ್ಯರ ಸುಗಮ ಸಂಚಾರ ಮತ್ತು ಸುರಕ್ಷತೆ ದೃಷ್ಟಿಯಿಂದ,
ಭಾರತೀಯ ಮೋಟಾರು ವಾಹನ ಕಾಯ್ದೆ ಸಾವಿರ 978 ಕಲಂ 115 116 ಮತ್ತು 117 ಹಾಗೂ ಕರ್ನಾಟಕ ಮೋಟಾರು ವಾಹನ ನಿಯಮಗಳು 1989ರ ನಿಯಮ 17ರಲ್ಲಿ ದತ್ತವಾಗಿರುವ ನಗರದ ಕೃಷ್ಣರಾಜ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಲಕ್ಷ್ಮಿಪುರಂ ಮತ್ತು ಕೃಷ್ಣರಾಜ ಕಾನೂನು-ಸುವ್ಯವಸ್ಥೆ ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಒಳಪಡುವ
ಎಂ.ಎನ್.ಜೋಯಿಸ್ ವೃತ್ತದಿಂದ ರಾಮಸ್ವಾಮಿ ವೃತ್ತ, ತಾತಯ್ಯ ವೃತ್ತ, ಬಸವೇಶ್ವರ ವೃತ್ತ, ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ, ನಂಜನಗೂಡು ರಸ್ತೆ ಹಾಗೂ ರಾಜಹಂಸ ವೃತ್ತದವರೆಗಿನ ರಸ್ತೆಯ ಎರಡು ಬದಿಗಳಲ್ಲಿ ತಾತ್ಕಾಲಿಕವಾಗಿ 2022 ರ ಜೂನ್ 20 ಮತ್ತು 21 ರಂದು ವಾಹನ ನಿಲುಗಡೆಯನ್ನು ನಿಷೇಧಿಸಿ ನಿರ್ಬಂಧ ವಿಧಿಸಿ ಅಧಿಸೂಚನೆಯನ್ನು ಹೊರಡಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಡಾ.ಚಂದ್ರಗುಪ್ತ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.